ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ಇಂದು ಬೆಳಿಗ್ಗೆ ಖಾಸಗಿ ಎಕ್ಸ್ ಪ್ರೆಸ್ ಬಸ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಶಾಲ ಬಾಲಕಿ ವರ್ಷಿತಾ ಮೃತಪಟ್ಟಿದ್ದಾರೆ.
ಕಾಪು ಮಹಾದೇವಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ವರ್ಷಿತಾ(13) ಮೃತಪಟ್ಟ ವಿದ್ಯಾರ್ಥಿನಿ.
ಇಂದು ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ವರ್ಷಿತಾ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ರಸ್ತೆ ದಾಟಲು ನಿಂತಿದ್ದ ವೇಳೆ ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಖಾಸಗಿ ಎಕ್ಸ್ ಪ್ರೆಸ್ ಬಸ್ ಅತೀ ವೇಗದಿಂದ ಬಂದು ವರ್ಷಿತಾಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಬಾಲಕಿಯ ತಲೆಗೆ ತೀವ್ರ ಗಾಯಾಗಳಾಗಿತ್ತು. ಈ ವೇಳೆ ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿಮಧ್ಯೆ ಆಕೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಬಸ್ಸನ್ನು ವಶಕ್ಕೆ ಪಡೆದಿರುವ ಕಾಪು ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…