ಕಾಪು: ಖಾಸಗಿ ಬಸ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕಾಪು ಪಾಂಗಾಳ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಪಡುಕೆರೆ ನಿವಾಸಿ ಕೃಷ್ಣ ಎಂದು ಗುರುತಿಸಲಾಗಿದೆ.
ಪಾಂಗಾಳ ಸಮೀಪ ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ ಸ್ಕೂಟರ್ ನಲ್ಲಿ ಆಗಮಿಸುತ್ತಿದ್ದ ಕೃಷ್ಣ ಅವರ ಸ್ಕೂಟರ್ ಗೆ ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ಸು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸವಾರನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸವಾರ ಮೃತಪಟ್ಟಿದ್ದಾರೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…