Featured

ಕಾಪು : ಗಂಡನಿಂದ ಮಾನಸಿಕ ಹಾಗೂ ದೈಹಿಕ ಕಿರುಕುಳ – ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ  ; ಪ್ರಕರಣ ದಾಖಲು – Vishwanews24

ಉಡುಪಿ: ಗಂಡನಿಂದ ಮಾನಸಿಕ ಹಾಗೂ ದೈಹಿಕ ಕಿರುಕುಳ – ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ  ; ಪ್ರಕರಣ ದಾಖಲು – Vishwanews24

ಉಡುಪಿ: ಗಂಡನ ಮಾನಸಿಕ ಹಾಗೂ ದೈಹಿಕ ಕಿರುಕುಳ ತಾಳಲಾರದೇ ಮಹಿಳೆಯೊಬ್ಬರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಡುಪಿಯ ಕಾಪು ತಾಲ್ಲೂಕಿನ ನಡ್ಸಾಲು ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಪ್ರಮೀಳಾ (40) ಎಂದು ಗುರುತಿಸಲಾಗಿದೆ.

ಪ್ರಮೀಳಾ ಎಂಬುವವರನ್ನು 15 ವರ್ಷಗಳ ಹಿಂದೆ ಭಾಸ್ಕರ ಶೆಟ್ಟಿ ಎಂಬವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಮದುವೆಯಾದ ದಿನದಿಂದ ಗಂಡ ಭಾಸ್ಕರ ಶೆಟ್ಟಿ ಪತ್ನಿಯ ಬಗ್ಗೆ ಅನುಮಾನಪಡುತ್ತಾ ಕೈಗಳಿಂದ ಹೊಡೆದು, ಕಾಲುಗಳಿಂದ ತುಳಿದು ದೈಹಿಕವಾಗಿ ಹಿಂಸಿಸುತ್ತಿದ್ದರು.

ಇದರಿಂದ ಬೇಸತ್ತ ಪ್ರಮೀಳಾ ತನ್ನ ತಂದೆಯ ಸಹಾಯದಿಂದ ಪಡುಬಿದ್ರಿಯಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದರು. ಆದರೂ ಆತ ಹಿಂಸಿಸುತ್ತಿದ್ದ. ಡಿ. 18 ರಂದು ರಾತ್ರಿ 10 ಗಂಟೆಗೆ ಭಾಸ್ಕರ ಕುಡಿದು ಬಂದು ಪತ್ನಿ ಮೇಲೆ ಹಲ್ಲೆ ನಡೆಸಿದ್ದರು. ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ವೇಳೆ ಪೊಲೀಸರು ಠಾಣೆಗೆ ಕರೆಸಿ ಎಚ್ಚರಿಕೆ ನೀಡಿ ಕಳುಹಿಸಿದ್ದರು.

ಆದರೆ ಡಿ. 20 ರಂದು ರಾತ್ರಿ 10 ಗಂಟೆಗೆ ಪ್ರಮೀಳಾ ತನ್ನ ತಾಯಿ ಹಾಗೂ ಮಗನ ಜೊತೆ ಮನೆಯಲ್ಲಿ ಊಟ ಮಾಡುತ್ತಿದ್ದರು.

ಈ ವೇಳೆ ಕುಡಿದು ಬಂದ ಭಾಸ್ಕರ ಮಗನಿಗೂ ಮದ್ಯವನ್ನು ಕುಡಿಯುವಂತೆ ಒತ್ತಾಯಿಸಿರುತ್ತಾರೆ, ಇದಕ್ಕೆ ಪ್ರಮೀಳಾ ಆಕ್ಷೇಪಿಸಿದಾಗ ಅವಾಚ್ಯವಾಗಿ ಬೈದು ಕಾಲಿಗೆ ಹೊಟ್ಟೆಗೆ ತುಳಿದು ಹೊಡೆದಿದ್ದಾರೆ.

ಇದರಿಂದ ಬೇಸತ್ತ ಪ್ರಮೀಳಾ ಡಿ.27ರಂದು ಸಂಜೆ 6:30 ಗಂಟೆಗೆ ಮನೆಯಲ್ಲಿ ತಂದಿರಿಸಿದ ನಿದ್ರೆಮಾತ್ರೆಯನ್ನು ಸೇವಿಸಿ, ಅಸ್ವಸ್ಥಗೊಂಡಿದ್ದಾರೆ. ಇದನ್ನು ಗಮನಿಸಿದ ತಾಯಿ ಅಸ್ವಸ್ಥಗೊಂಡ ಪ್ರಮೀಳಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

14 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

14 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

14 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

15 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

15 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

15 hours ago