ಉಡುಪಿ

ಕಾಪು : ಗುರ್ಮೆ ಸುರೇಶ್‌ ಶೆಟ್ಟಿ ಅವರಿಗೆ ಪೂರ್ಣ ಜನ ಬೆಂಬಲ : ಸಚಿವ ಕೋಟ – Vishwanews24

ಸಮಸ್ತ ಬಿಲ್ಲವರು, ಈಡಿಗರ ಒತ್ತಾಸೆಯಂತೆ ನಾರಾಯಣಗುರು ನಿಗಮ ಸ್ಥಾಪನೆ

ಕಾಪು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರವು ಸಮಸ್ತ ಬಿಲ್ಲವರು ಮತ್ತು ಈಡಿಗರ ಒತ್ತಾಸೆಯಂತೆ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವೂ ಸೇರಿದಂತೆ ಕುಂಬಾರ, ಬಲಿಜರು, ಗಾಣಿಗ ಸಹಿತ 12 ನಿಗಮಗಳನ್ನು ಸ್ಥಾಪಿಸಿದೆ.

ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆ, ಅಗ್ನಿಪಥ್‌ ಸೇನಾ ತರಬೇತಿಗಾಗಿ ಕೋಟಿ ಚೆನ್ನಯ ಸೇನಾ ಪೂರ್ವ ತರಬೇತಿ ಶಿಬಿರ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ, ಸಮುದಾಯ ಭವನವೂ ಸೇರಿದಂತೆ ಹಿಂದೆಂಗಿಂತಲೂ ಹೆಚ್ಚಿನ ಮೊತ್ತದ ಅನುದಾನವನ್ನು ಬಿಡುಗಡೆಗೊಳಿಸಿದೆ. ಸರಕಾರದ ಅಭಿವೃದ್ಧಿ ಕಾರ್ಯಗಳೇ ಬಿಜೆಪಿಯ ಗೆಲುವಿಗೆ ಪೂರಕವಾಗಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಮಂಗಳವಾರ ಕಾಪು ಮಂಡಲ ಬಿಜೆಪಿ ಚುನಾವಣೆ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಬಿಜೆಪಿ ರಾಜ್ಯಾದ್ಯಂತ 2 ದಿನಗಳ ಕಾಲ ಮಹಾ ಪ್ರಚಾರ ಅಭಿಯಾನವನ್ನು ನಡೆಸು ತ್ತಿದ್ದು ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ನಾರಾಯಣಗುರುಗಳ ಮೂರ್ತಿಗೆ ಮಾಲಾರ್ಪಣೆಗೈದು, ಪ್ರಾರ್ಥನೆ ಸಲ್ಲಿಸಿ ಮಹಾ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದರು.

ಗುರ್ಮೆ ಸುರೇಶ್‌ ಶೆಟ್ಟಿ ಅವರಿಗೆ ಪೂರ್ಣ ಜನ ಬೆಂಬಲ
ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿ ಅವರಿಗೆ ಸಂಪೂರ್ಣ ಜನ ಬೆಂಬಲ ವ್ಯಕ್ತವಾಗುತ್ತಿದೆ. ಎಲ್ಲ ವರ್ಗದ ಜನರು ಜಾತಿ, ಮತ, ಭೇದವಿಲ್ಲದೇ ಅವರ ಸೇವಾ ಕಾರ್ಯವನ್ನು ಪ್ರಶಂಸಿಸಿ, ಬೆಂಬಲಿಸುತ್ತಿದ್ದಾರೆ. ಕೇಂದ್ರದಲ್ಲಿ ನರೇಂದ್ರ ಮೋದಿ ಮತ್ತು ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಸಾಧನೆ ಹಾಗೂ ಕಳೆದ 5 ವರ್ಷಗಳಲ್ಲಿ ಶಾಸಕ ಲಾಲಾಜಿ ಆರ್‌. ಮೆಂಡನ್‌ ಅವರು ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸಿ ಜನರೇ ಸ್ವಯಂ ಪ್ರೇರಿತರಾಗಿ ಬಿಜೆಪಿ ಬೆಂಬಲಕ್ಕೆ ನಿಂತಿದ್ದಾರೆ ಎಂದರು.

ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಶ್ರೀಕಾಂತ್‌ ನಾಯಕ್‌, ಚುನಾವಣಾ ಉಸ್ತುವಾರಿ ಸುಲೋಚನಾ ಭಟ್‌, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಆಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್‌, ಪ್ರಮುಖರಾದ ಕಿರಣ್‌ ಆಳ್ವ, ಹರೀಶ್‌ ಶೆಟ್ಟಿ ಉಪಸ್ಥಿತರಿದ್ದರು.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

7 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

15 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

15 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

16 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

16 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

16 hours ago