Featured

ಕಾಪು : ಗೃಹಿಣಿಯ ಕತ್ತಿನಿಂದ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದ ಸರಗಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು -Vishwanews24

ಕಾಪು: ಇಲ್ಲಿನ ಕಾಪು ಪಾದೂರು ಗ್ರಾಮದ ಹೊಸಬೆಟ್ಟು ಬಸದಿಯ ಬಳಿ ಮನೆಯ ತೋಟದಲ್ಲಿ ತರಕಾರಿ ಕೊಯ್ಯುತ್ತಿದ್ದ ಗೃಹಿಣಿಯ ಕತ್ತಿನಿಂದ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದ ಸರಗಳ್ಳನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕು ಉಂಚಳ್ಳಿ ಗ್ರಾಮದ ಬನವಾಸಿ ನಿವಾಸಿ ಅರವಿಂದ ನಾರಾಯಣ ನಾಯ್ಕ (34) ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ ಮಾಂಗಲ್ಯ ಸರ ಸಹಿತ 1,46,200 ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಪಾದೂರು ಜೈನ ಬಸದಿ ನಿವಾಸಿ ಗೀತಾ ಸುಜನ್‌ ಕುಮಾರ್‌ ಅವರು ಮನೆಯ ತೋಟದಲ್ಲಿ ಅ. 11ರಂದು ತರಕಾರಿ ಕೊಯ್ಯುತ್ತಿದ್ದಾಗ ಅಪರಿಚಿತ ವ್ಯಕ್ತಿಯೋರ್ವ ಬಂದು ಕುತ್ತಿಗೆಗೆ ಬಟ್ಟೆ ಬಿಗಿದು ಕುತ್ತಿಗೆಯಲ್ಲಿದ್ದ ಮೂರು ಪವನ್‌ ತೂಕದ ಮಾಂಗಲ್ಯ ಸರವನ್ನು ಕಿತ್ತು ಪರಾರಿಯಾಗಿದ್ದ. ಗೀತಾ ಅವರು ವಿರೋಧಿಸಿದ್ದ ವೇಳೆ ಅವರ ಕುತ್ತಿಗೆ, ಕೈಗೆ ಮತ್ತು ಮೂಗಿನ ಕೆಳಗಡೆ ಗಾಯವಾಗಿತ್ತು. ಈ ಬಗ್ಗೆ ಶಿರ್ವ ಪೊಲೀಸ್‌ ಠಾಣೆ ಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕಾಪು ವೃತ್ತ ನಿರೀಕ್ಷಕ ಮಹೇಶ್‌ ಪ್ರಸಾದ್‌ ಅವರು ತನಿಖೆ ಮುಂದುವರಿಸಿದ್ದರು.

ಸರವನ್ನು ಬಲತ್ಕಾರವಾಗಿ ಎಳೆಯುವಾಗ ಗೀತಾರವರು ಅಡ್ಡಿಪಡಿಸಿದ್ದರಿಂದ ಕುತ್ತಿಗೆಯ ಬಳಿ ಹಾಗೂ ಕೈಗೆ ಮತ್ತು ಮೂಗಿನ ಕೆಳಗಡೆ ಗಾಯವಾಗಿದೆ. ಈ ಘಟನೆಯ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಕಾರ್ಯ ಪ್ರವೃತರಾದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago