ಕಾಪು: ಇಲ್ಲಿನ ಕಾಪು ಪಾದೂರು ಗ್ರಾಮದ ಹೊಸಬೆಟ್ಟು ಬಸದಿಯ ಬಳಿ ಮನೆಯ ತೋಟದಲ್ಲಿ ತರಕಾರಿ ಕೊಯ್ಯುತ್ತಿದ್ದ ಗೃಹಿಣಿಯ ಕತ್ತಿನಿಂದ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದ ಸರಗಳ್ಳನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕು ಉಂಚಳ್ಳಿ ಗ್ರಾಮದ ಬನವಾಸಿ ನಿವಾಸಿ ಅರವಿಂದ ನಾರಾಯಣ ನಾಯ್ಕ (34) ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ ಮಾಂಗಲ್ಯ ಸರ ಸಹಿತ 1,46,200 ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಪಾದೂರು ಜೈನ ಬಸದಿ ನಿವಾಸಿ ಗೀತಾ ಸುಜನ್ ಕುಮಾರ್ ಅವರು ಮನೆಯ ತೋಟದಲ್ಲಿ ಅ. 11ರಂದು ತರಕಾರಿ ಕೊಯ್ಯುತ್ತಿದ್ದಾಗ ಅಪರಿಚಿತ ವ್ಯಕ್ತಿಯೋರ್ವ ಬಂದು ಕುತ್ತಿಗೆಗೆ ಬಟ್ಟೆ ಬಿಗಿದು ಕುತ್ತಿಗೆಯಲ್ಲಿದ್ದ ಮೂರು ಪವನ್ ತೂಕದ ಮಾಂಗಲ್ಯ ಸರವನ್ನು ಕಿತ್ತು ಪರಾರಿಯಾಗಿದ್ದ. ಗೀತಾ ಅವರು ವಿರೋಧಿಸಿದ್ದ ವೇಳೆ ಅವರ ಕುತ್ತಿಗೆ, ಕೈಗೆ ಮತ್ತು ಮೂಗಿನ ಕೆಳಗಡೆ ಗಾಯವಾಗಿತ್ತು. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕಾಪು ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್ ಅವರು ತನಿಖೆ ಮುಂದುವರಿಸಿದ್ದರು.
ಸರವನ್ನು ಬಲತ್ಕಾರವಾಗಿ ಎಳೆಯುವಾಗ ಗೀತಾರವರು ಅಡ್ಡಿಪಡಿಸಿದ್ದರಿಂದ ಕುತ್ತಿಗೆಯ ಬಳಿ ಹಾಗೂ ಕೈಗೆ ಮತ್ತು ಮೂಗಿನ ಕೆಳಗಡೆ ಗಾಯವಾಗಿದೆ. ಈ ಘಟನೆಯ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಕಾರ್ಯ ಪ್ರವೃತರಾದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…