ಉಡುಪಿ: ಇಲ್ಲಿನ ಕಾಪುವಿನಲ್ಲಿ ನಡೆದ ಭೀಕರ ಸಿಲಿಂಡರ್ ಸ್ಪೋಟದಲ್ಲಿ ಗಂಭೀರ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ ಇಂದು 4ಕ್ಕೇರಿದೆ.
ಮಲ್ಲಾರು ಗ್ರಾಮದ ಗುಡ್ಡೇಕೆರಿ ಸಲಫಿ ಮಸೀದಿ ಬಳಿಯ ಗುಜರಿ ಅಂಗಡಿಯಲ್ಲಿ ಮಾ.21ರಂದು ನಡೆದ ಸ್ಫೋಟದಲ್ಲಿ ಮೃತಪಟ್ಟವರು ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಮೃತರನ್ನು ಗುಜರಿ ಅಂಗಡಿಯಲ್ಲಿ ಕಾರ್ಮಿಕರಾಗಿದ್ದ ಸಾಗರ ಮೂಲದ ನಯಾಝ್(36) ಮತ್ತು ವೀರಪ್ಪ ಎಂದು ಗುರುತಿಸಲಾಗಿದೆ. ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಮಾ.21ರಂದು ಬೆಳಗ್ಗೆ ಗುಜರಿ ಅಂಗಡಿಯಲ್ಲಿ ಕಂಪ್ರೆಸರ್ ಅನ್ನು ಗ್ಯಾಸ್ ಕಟ್ಟರ್ ಮೂಲಕ ತುಂಡರಿಸುತ್ತಿದ್ದ ವೇಳೆ ಈ ಸ್ಫೋಟ ಸಂಭವಿಸಿತ್ತು. ಈ ವೇಳೆ ಇಬ್ಬರು ಸಜೀವ ದಹನಗೊಂಡಿದ್ದರೆ, ಐವರು ಗಂಭೀರವಾಗಿ ಗಾಯಗೊಂಡಿದ್ದರು.
ಇನ್ನಿಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಬೆಳಪು ಗ್ರಾಮ ಪಂಚಾಯತ್ ಸದಸ್ಯ ಫಹೀಮ್ ಮಣಿಪಾಲ ಆಸ್ಪತ್ರೆಯಲ್ಲಿ ಹಾಗೂ ಇನ್ನೊಬ್ಬರು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…