ಶಿರ್ವ: ಪೊಲೀಸರ ಖಚಿತ ಮಾಹಿತಿ ಆಧಾರದ ಮೇರೆಗೆ ಆದಿತ್ಯವಾರ ಬೆಳಗ್ಗೆ ಒಂದು ಮೂವತ್ತರ ಸುಮಾರಿಗೆ ಚಂದ್ರ ನಗರದ ಅಬೂಬಕ್ಕರ್ ಎಂಬವರ ಮನೆಯಲ್ಲಿ ಅಕ್ರಮವಾಗಿ ದನದ ಮಾಂಸವನ್ನು ಮಾರಾಟ ಮಾಡುವ ಉದ್ದೇಶದಿಂದ ಕಡಿದು ತಯಾರಿಸುತ್ತಿದ್ದಾರೆ ಎಂಬ ಮಾಹಿತಿಯ ಮೇರೆಗೆ ಶಿರ್ವ ಎಸೈ ರಾಘವೇಂದ್ರ ಸಿ ಮತ್ತು ಅವರ ತಂಡ ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದರು ಎಂಬ ಮಾಹಿತಿ ಲಭ್ಯವಾಗಿವೆ.
ಈ ಸಂದರ್ಭದಲ್ಲಿ ಪೋಲೀಸರನ್ನು ಕಂಡು ಆರೋಪಿಗಳು ಓಡಿಹೋಗಿದ್ದು ಅವರನ್ನು ಬೆನ್ನಟ್ಟಿ ಒರ್ವನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾದರು.
ಬಂಧಿಸಿದ ಆರೋಪಿಯನ್ನು ಸಂಶುದ್ದೀನ್ ಪ್ರಾಯ (53) ಎಂದು ಎನ್ನಲಾಗುತ್ತಿದ್ದು ಉಳಿದ ಮೂವರು ಕಳತ್ತೂರು ಪೈಯ್ಯಾರು ನಿವಾಸಿ ನಜೀರ್‌ರನ ಮಗ ಆಶೀರ್, ಉಮ್ಮರಬ್ಬನ ಮಗ ಆಶ್ರಫ್,ಚಂದ್ರನಗರದ ಅಬೂಬಕ್ಕರ್ ಪರಾರಿಯಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಘಟನಾ ಸ್ಥಳದಿಂದ ಮಾಂಸ ಮಾಡಲು ಉಪಯೋಗಿಸುತ್ತಿದ್ದ ಪರಿಕರಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಒಂದೇ ವಾರದಲ್ಲಿ ಪದೇ ಪದೇ ಮರುಕಳಿಸುವ ಪ್ರಕರಣಗಳು
ಪಡುಬಿದ್ರೆ ಠಾಣೆ ವ್ಯಾಪ್ತಿಯ ಉಚ್ಚಿಲ ಎಂಬಲ್ಲಿ ಕಳೆದ ವಾರ ಅಕ್ರಮ ಕಸಾಯಿಖಾನೆ ಮೇಲೆ ದಾಳಿ ನಡೆಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…