Featured

ಕಾಪು : ಚುನಾವಣೆಯಲ್ಲಿ ಗೆದ್ದು ಹುಟ್ಟೂರ ಜನತೆಯ ಸೇವೆಗಾಗಿ ನನ್ನ ಜೀವನವನ್ನೇ ಮುಡಿಪಾಗಿಡುತ್ತೇನೆ  : ಗುರ್ಮೆ ಸುರೇಶ್‌ ಶೆಟ್ಟಿ – Vishwanews24

ಕಾಪು : ಚುನಾವಣೆಯಲ್ಲಿ ಗೆದ್ದು ಹುಟ್ಟೂರ ಜನತೆಯ ಸೇವೆಗಾಗಿ ನನ್ನ ಜೀವನವನ್ನೇ ಮುಡಿಪಾಗಿಡುತ್ತೇನೆ  : ಗುರ್ಮೆ ಸುರೇಶ್‌ ಶೆಟ್ಟಿ

ಕಾಪು : ರಾಜಕೀಯದಿಂದ ಹಣ ಸಂಪಾದನೆ ಮಾಡಬೇಕಾಗಿಲ್ಲ. ಭಗವಂತ ನನಗೆ ಜೀವನಕ್ಕೆ ಬೇಕಾಗುವಷ್ಟನ್ನು ನೀಡಿದ್ದಾನೆ. ತಾಯಿಯ ಪ್ರೇರಣೆಯಂತೆ ಸಮಾಜದ ಸೇವೆ ಮಾಡುತ್ತಿದ್ದ ನನಗೆ ಬಿಜೆಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್‌ ನೀಡಿ, ನನ್ನ ಹುಟ್ಟೂರಿನ ಜನತೆಯ ಸೇವೆ ಮಾಡುವ ಅವಕಾಶವನ್ನು ಮಾಡಿಕೊಟ್ಟಿದೆ. ಚುನಾವಣೆಯಲ್ಲಿ ಗೆದ್ದು ಹುಟ್ಟೂರ ಜನತೆಯ ಸೇವೆಗಾಗಿ ನನ್ನ ಜೀವನವನ್ನೇ ಮುಡಿಪಾಗಿಡುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿ ಮತದಾರರಲ್ಲಿ ಮನವಿ ಮಾಡಿದರು.

ಕಾಪು ಪುರಸಭೆ ವ್ಯಾಪ್ತಿಯ ಕಾಪು ಪೇಟೆ ಸಹಿತ ವಿವಿಧೆಡೆಗಳಲ್ಲಿ ಮತಯಾಚನೆ ನಡೆಸಿ, ಕಾಪು ಪೇಟೆಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಕಾರ್ಯಕರ್ತರ ಶ್ರಮಕ್ಕೆ ಋಣಿ : ವ್ಯಕ್ತಿಗಿಂತ ಪಕ್ಷ ದೊಡ್ಡದು, ಪಕ್ಷಕ್ಕಿಂತ ರಾಷ್ಟ್ರ ದೊಡ್ಡದು ಎಂಬ ಶ್ರೇಷ್ಟ ಚಿಂತನೆಯೊಂದಿಗೆ ಮುನ್ನಡೆಯುತ್ತಿರುವ ಬಿಜೆಪಿ ರಾಜ್ಯದಲ್ಲಿ 72 ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದೆ. ನನ್ನನ್ನು ಗುರುತಿಸಿ ಪಕ್ಷ ನನಗೆ ಅವಕಾಶ ಮಾಡಿಕೊಟ್ಟಿದೆ. ಪಕ್ಷ ಅಭ್ಯರ್ಥಿಯನ್ನಾಗಿ ಘೋಷಿಸಿದ ಬಳಿಕ ಶಾಸಕರಾದಿಯಾಗಿ ಪಕ್ಷದ ಪ್ರಮುಖರು, ಕಾರ್ಯಕರ್ತರು ನಿರಂತರ ಕ್ಷೇತ್ರ ಸಂಚಾರ ನಡೆಸಿ ಪಕ್ಷದ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ. ನನ್ನ ಜತೆಗಿದ್ದು ಈ ಚುನಾವಣಾ ಯಜ್ಞದಲ್ಲಿ ಪಾಲ್ಗೊಳ್ಳುತ್ತಿರುವ ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಇನ್ನುಳಿದ ಅವಧಿಯಲ್ಲೂ ಪಕ್ಷಕ್ಕಾಗಿ ಕೆಲಸ ಮಾಡೋಣ. ಬಿಜೆಪಿಯನ್ನು ಗೆಲ್ಲಿಸೋಣ ಎಂದರು.

ಗುರ್ಮೆ ಅವರನ್ನು ಸರಕಾರದ ಭಾಗವಾಗಿಸೋಣ : ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌ ಮಾತನಾಡಿ, ಕಾಪು ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಲ್ಲಿ ಹಿಂದೆಂದೂ ಕಂಡರಿಯದ, ಕೇಳರಿಯದ ರೀತಿಯ ಅಭಿವೃದ್ಧಿ ಕಾರ್ಯಗಳು ನಡೆದಿವೆ. ನನ್ನ ಅವಧಿಯಲ್ಲಿ ಸರಕಾರದ ಮುಂದೆ ಪ್ರಸ್ತಾವಿಸಿರುವ ಹಲವು ಯೋಜನೆಗಳು ಮಂಜೂರಾತಿ ಹಂತದಲ್ಲಿವೆ. ಗುರ್ಮೆ ಸುರೇಶ್‌ ಶೆಟ್ಟಿ ಅವರು ನನ್ನ ಉತ್ತರಾಧಿಕಾರಿಯಾಗಿ, ನಾನು ಮತ್ತು ಕ್ಷೇತ್ರದ ಜನತೆ ಕಂಡಿರುವ ಅಭಿವೃದ್ಧಿ ಕುರಿತಾದ ಕನಸುಗಳನ್ನು ಸಾಕಾರಗೊಳಿಸಲು ಕಟಿಬದ್ಧರಾಗಿದ್ದಾರೆ. ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಗುರ್ಮೆ ಅವರನ್ನು ಸರಕಾರದ ಭಾಗವಾಗುವ ಅವಕಾಶ ಕಲ್ಪಿಸಿಕೊಡೋಣ ಎಂದರು.

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

3 days ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

3 days ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

3 days ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

3 days ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

3 days ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

3 days ago