ಕಾಪು: ಕಾಪು ಶ್ರೀ ಹಳೇ ಮಾರಿಗುಡಿ ದೇವಸ್ಥಾನ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಮೂರನೇ ಮಾರಿಗುಡಿ ದೇವಸ್ಥಾನದಲ್ಲಿ ವಾರ್ಷಿಕವಾಗಿ ನಡೆಯುವ ಕಾಲಾವಧಿ ಆಟಿ ಮಾರಿಪೂಜೆಯು ಜು. 27 ಮತ್ತು 28 ರಂದು ಜರಗಲಿದೆ ಎಂದು ಮೂರೂ ಮಾರಿಗುಡಿಯ ಆಡಳಿತ ಮಂಡಳಿಗಳ ಪ್ರಕಟಣೆಯು ತಿಳಿಸಿದೆ.
ಕೋವಿಡ್ 19 ಹಿನ್ನೆಲೆಯಲ್ಲಿ ಮತ್ತು ಸರಕಾರದ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಮಂಗಳವಾರ ರಾತ್ರಿ ಮತ್ತು ಬುಧವಾರ ಹಗಲಿನಲ್ಲಿ ಮೂರೂ ಮಾರಿಗುಡಿಗಳಲ್ಲೂ ಯಥಾವತ್ತಾಗಿ ಮಾರಿಪೂಜೆಯ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲಾಗುವುದು. ಕೋವಿಡ್ ನಿಯಮಾನುಸಾರ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಭಕ್ತರಿಗೆ ದೇವಿಯ ದರುಶನ ಪಡೆಯಲು ಅವಕಾಶ ಮಾಡಿಕೊಡಲಾಗುವುದು.
ಯಾವುದೇ ರೀತಿಯ ಜಾತ್ರೆ, ಜನ ಜಂಗುಳಿಗೆ ಅವಕಾಶವಿಲ್ಲದೇ ಸಂಪ್ರಧಾಯದಂತೆ ಕಾಲಾವಧಿ ಆಟಿ ಮಾರಿಪೂಜೆಯನ್ನು ಸರಳ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದ್ದು, ಭಕ್ತಾಧಿಗಳು ಸಹಕರಿಸುವಂತೆ ಕಾಪು ಹಳೇ ಮಾರಿಗುಡಿಯ ಆಡಳಿತ ಮೊಕ್ತೇಸರ ಪ್ರಸಾದ್ ಶೆಣೈ ಕಾಪು, ಶ್ರೀ ಹೊಸ ಮಾರಿಗುಡಿಯ ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ ಮತ್ತು ಶ್ರೀ ಮೂರನೇ ಮಾರಿಗುಡಿಯ ಕಾರ್ಯ ನಿರ್ವಹಣಾಧಿಕಾರಿ ಸುಧೀರ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…