Featured

ಕಾಪು: ಜೂನ್ 12ರಿಂದ 14ರವರೆಗೆ ಮೂರು ದಿನ ಹಲಸು, ಮಾವು ಮೇಳ – vishwanews24

ಕಾಪು: ಜೂನ್ 12ರಿಂದ 14ರವರೆಗೆ ಮೂರು ದಿನ ಹಲಸು, ಮಾವು ಮೇಳ

ಕಾಪು : ಶಕ್ತಿ ಇವೆಂಟ್ ಪ್ರಾಯೋಜಕತ್ವದಲ್ಲಿ ಇಲ್ಲಿನ ಹಳೆ ಮಾರಿಗುಡಿ ಪರಿಸರದಲ್ಲಿ ಹಲಸು ಮತ್ತು ಮಾವಿನ ಮೇಳ ಜೂನ್ 12ರಿಂದ 14ರವರೆಗೆ ಆಯೋಜಿಸಲಾಗಿದೆ.

ಶುಕ್ರವಾರ ಹಲಸು- ಮಾವಿನ ಮೇಳದ ಭಿತ್ತಿಪತ್ರ ಬಿಡುಗಡೆಗೊಳಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಮಧ್ಯವರ್ತಿಗಳ ಹಾವಳಿಯಿಂದ ಬಳಲುತ್ತಿರುವ ಸ್ಥಳೀಯ ರೈತರಿಗೆ ನೇರ ಮಾರುಕಟ್ಟೆ ಕಲ್ಪಿಸಿ, ತಾವೇ ಬೆಳೆದ ವಿವಿಧ ತಳಿಯ ಹಲಸು, ಮಾವಿನ ಹಣ್ಣುಗಳನ್ನು ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡಲು ವೇದಿಕೆ ಒದಗಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: 

ಮೇಳದಲ್ಲಿ ಹಲಸು ಮತ್ತು ಮಾವಿನಿಂದ ತಯಾರಿಸಬಹುದಾದ ವಿವಿಧ ಖಾದ್ಯಗಳು, ಹಪ್ಪಳ, ಉಪ್ಪಿನಕಾಯಿ, ಜೂಸ್ ಸೇರಿದಂತೆ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ. ಹಲಸು, ಮಾವಿಗೆ ಜಾಗತಿಕ ಮಟ್ಟದಲ್ಲಿ ಉತ್ತಮ ಬೇಡಿಕೆ ಇದೆ. ಸ್ಥಳೀಯ ರೈತರ ಆರ್ಥಿಕ ಶಕ್ತಿ ಹೆಚ್ಚಿಸುವುದು, ಯುವಕರಿಗೆ ಕೃಷಿ ಆಧಾರಿತ ಉದ್ಯಮಗಳಲ್ಲಿ ಹೊಸ ಅವಕಾಶಗಳನ್ನು ಪರಿಚಯಿಸುವುದು ಮೇಳದ ಉದ್ದೇಶ ಎಂದು ತಿಳಿಸಿದರು.

ಸಂಘಟಕ ಗುರುಪ್ರಸಾದ್ ಮಾತನಾಡಿ, ವಿವಿಧ ಭಾಗಗಳಿಂದ ಸುಮಾರು 70 ಮಳಿಗೆಗಳು ಇರಲಿವೆ. ಅಪರೂಪದ, ರುಚಿಕರ ವಿವಿಧ ತಳಿಯ ಮಾವು, ಹಲಸಿನ ಹಣ್ಣುಗಳ ಪ್ರದರ್ಶನ, ಮಾರಾಟ ನಡೆಯಲಿದೆ. ಕೃಷಿ ತಜ್ಞರಿಂದ ಆಧುನಿಕ ಕೃಷಿ ಪದ್ಧತಿ, ತಂತ್ರಜ್ಞಾನಗಳ ಕುರಿತು ಮಾಹಿತಿ ನೀಡಲಾಗುವುದು ಎಂದರು.

ಇದನ್ನೂ ಓದಿ: 

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

5 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

5 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

6 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

7 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

10 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

10 hours ago