ಉಡುಪಿ

ಕಾಪು ಜೆಡಿಎಸ್‌ ಚುನಾವಣಾ ಕಚೇರಿ ಉದ್ಘಾಟನೆ ..: “ಜೆಡಿಎಸ್‌ಗೆ ಮರಳಿ ಅಧಿಕಾರ ನೀಡಲು ಜನರ ನಿರ್ಧಾರ’

ಕಾಪುರಾಜ್ಯದಲ್ಲಿ ಆಡಳಿತ ನಡೆಸಿರುವ ಎರಡೂ ರಾಷ್ಟ್ರೀಯ ಪಕ್ಷಗಳೂ ಜನ ವಿರೋಧಿಯಾಗಿದ್ದು, ಇವರ ಆಡಳಿತದ ಸರಕಾರ ಜನರ ನಿರೀಕ್ಷೆಗಳನ್ನು ಹುಸಿ ಗೊಳಿಸಿದೆ. ಇಂತಹ ಸಂದರ್ಭದಲ್ಲಿ ಜನ ಮತ್ತೆ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರ ನೇತೃತ್ವದ 20 ತಿಂಗಳ ಅವಧಿಯ ಸರಕಾರವನ್ನು ನೆನಪಿಸಿ ಕೊಳ್ಳುತ್ತಿದ್ದು, ಜೆಡಿಎಸ್‌ನ್ನು ಮರಳಿ ಅಧಿಕಾರಕ್ಕೆ ತರಲು ಜನರೇ ನಿರ್ಧರಿಸಿದ್ದಾರೆ ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಯೋಗೀಶ್‌ ಶೆಟ್ಟಿ ಬಾಲಾಜಿ ಹೇಳಿದರು.

ಕಾಪು ಮಹಾಬಲ ಮಾಲ್‌ನಲ್ಲಿ ಬುಧವಾರ ಜೆಡಿಎಸ್‌ನ ಕ್ಷೇತ್ರ ಚುನಾವಣಾ ಕಚೇರಿ ಉದ್ಘಾಟಿಸಿ, ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಜನತಾದರ್ಶನ, ಗ್ರಾಮ ವಾಸ್ತವ್ಯದ ಮೂಲಕ ಕರಾವಳಿ ಜನರ ಬದುಕಿನ ಅಧ್ಯಯನ ನಡೆಸಿದ್ದ ಕುಮಾರಸ್ವಾಮಿ ಅವರು ಎಲ್ಲಾ ವರ್ಗದ ಜನರ ಮನಗೆದ್ದಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಜೆಡಿಎಸ್‌ನಿಂದ 4 ಕಡೆ ಮತ್ತು ಬಿಎಸ್ಪಿ 1 ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದ್ದು, ಜೆಡಿಎಸ್‌ಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಕಾಪುವಿನಲ್ಲಿ ಎಲ್ಲ ವರ್ಗದವರ ಬೆಂಬಲದೊಂದಿಗೆ ನಮಗೂ ಗೆಲುವಿನ ವಿಶ್ವಾಸವಿದೆ ಎಂದರು.

ಜೆಡಿಎಸ್‌ ಅಭ್ಯರ್ಥಿ ಮನ್ಸೂರ್‌ ಇಬ್ರಾಹಿಂ ಮಾತನಾಡಿ, ಅಲ್ಪಸಂಖ್ಯಾಕರನ್ನು ವೋಟ್‌ ಬ್ಯಾಂಕ್‌ ಆಗಿ ಬಳಸಿಕೊಂಡು ಬರುತ್ತಿರುವ ಕಾಂಗ್ರೆಸ್‌ ಉಡುಪಿ ಜಿಲ್ಲೆಯಲ್ಲಿ ಕನಿಷ್ಠ ಒಬ್ಬನೇ ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ತಾ.ಪಂ., ಜಿ.ಪಂ. ಅಥವಾ ಅದಕ್ಕಿಂತ ಮೇಲಿನ ಸ್ತರದ ಜನಪ್ರತಿನಿಧಿಯನ್ನಾಗಿ ಆರಿಸುವತ್ತ ಗಮನಹರಿಸಿಲ್ಲ. ಇನ್ನು ಬಿಜೆಪಿ ಕೇವಲ ಹಿಂದೂಗಳ ಓಲೈಕೆಯಲ್ಲಿ ಮುಳುಗಿದೆ. ಎರಡೂ ಪಕ್ಷಗಳನ್ನು ತಿರಸ್ಕರಿಸಿ ಜೆಡಿಎಸ್‌ನ್ನು ಬೆಂಬಲಿಸಲು ಜನತೆ ತೀರ್ಮಾನಿಸಿದ್ದಾರೆ. ಜೆಡಿಎಸ್‌ನ ನಾಯಕರ ತ್ಯಾಗ ದಿಂದಾಗಿ ತನಗೆ ಸ್ಪರ್ಧಿಸಲು ಅವಕಾಶ ದೊರಕಿದ್ದು, ಈ ಅವಕಾಶವನ್ನು ಜನಸೇವೆಗೆ ದೊರಕಿದ ದೊಡ್ಡ ಅವಕಾಶವೆಂದು ತಿಳಿದು ಸದುಪಯೋಗ ಪಡಿಸಿಕೊಳ್ಳುವುದಾಗಿ ಭರವಸೆ ನೀಡಿದರು.

ಕಾಪು ಬ್ಲಾಕ್‌ ಜೆಡಿಎಸ್‌ ಅಧ್ಯಕ್ಷ ಸುಧಾಕರ ಶೆಟ್ಟಿ ಹೆಜಮಾಡಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕಾರ್ಯದರ್ಶಿ ಶೇಖರ್‌ ಕೋಟ್ಯಾನ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಪಕ್ಷದ ಮುಖಂಡರಾದ ಶಾಲಿನಿ ಶೆಟ್ಟಿ ಕೆಂಚನೂರು, ಉದಯ್‌ ಹೆಗ್ಡೆ, ದಿಲ್ಲೇಶ್‌ ಶೆಟ್ಟಿ, ಮಹಮ್ಮದ್‌ ಹ್ಯಾರಿಸ್‌ ಮೊದಲಾದವರು ಉಪಸ್ಥಿತರಿದ್ದರು.

ಜೆಡಿಎಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್‌ ಹಮೀದ್‌ ಯೂಸುಫ್‌ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

 

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

19 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

19 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ 2025-2026 ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

19 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

20 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

21 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

21 hours ago