ಕಾಪು, : ಜೇಸಿಐ ಭಾರತದ ನಿರ್ದೇಶನದಂತೆ ರಾಷ್ಟ್ರೀ ಯ ಭಾವೈಕ್ಯತಾ ದಿನಾಚರಣೆಯ ಪ್ರಯುಕ್ತ ಜೇಸಿಐ ಕಾಪು, ಜೇಸಿರೆಟ್ ವಿಭಾಗ, ಯುವಜೇಸಿ ವಿಭಾಗದ ಜಂಟಿ ಸಹಯೋಗದಲ್ಲಿ ಕಾಪು ಸುತ್ತಲಿನ ವಿವಿಧ ಶಾಲಾ – ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಸಿಬಂದಿಗಳಿಗೆ ಫೆ. 2ರಂದು ಭಾವೈಕ್ಯತೆಯ ಬಗ್ಗೆ ಪ್ರತಿಜ್ಞಾ ವಿಧಿ ಭೋದಿಸಲಾಯಿತು.
ಕಾಪು ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆ, ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆ, ಮಹಾದೇವಿ ಪ್ರೌಢಶಾಲೆ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಪೊಲಿಪು ಜೂನಿಯರ್ ಕಾಲೇಜು, ಉಚ್ಚಿಲ ಮಹಾಲಕ್ಷ್ಮೀ ಆಂಗ್ಲ ಮಾಧ್ಯಮ ಶಾಲೆ, ಸರಸ್ವತಿ ಮಂದಿರ ಪ್ರೌಢಶಾಲೆ, ಕಳತ್ತೂರು ಪಿ.ಕೆ.ಎಸ್. ಪ್ರೌಢಶಾಲೆ, ಶಿರ್ವ ವಿದ್ಯಾವರ್ಧಕ ಸೆಂಟ್ರಲ್ ಸ್ಕೂಲ್, ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರ ಸಹಿತವಾಗಿ ಸಾವಿರಾರು ಮಂದಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಕಾಪು ಜೇಸಿಐ ಅಧ್ಯಕ್ಷೆ ಶಾರದೇಶ್ವರಿ ಗುರ್ಮೆ, ಜೇಸಿಐ ನಿಕಟಪೂರ್ವ ವಲಯಾಧ್ಯಕ್ಷ ರಾಕೇಶ್ ಕುಂಜೂರು, ಅಭಿವೃದ್ಧಿ ಮತ್ತು ಬೆಳವಣ ಗೆ ವಿಭಾಗದ ನಿರ್ದೇಶಕಿ ಸೌಮ್ಯ ರಾಕೇಶ್, ಪೂರ್ವ ವಲಯಾದಿಕಾರಿಗಳಾದ ಅನಿಲ್ ಕುಮಾರ್, ಪ್ರವೀಣ್ ಕುಮಾರ್ ಗುರ್ಮೆ, ಶಿವಣ್ಣ ಬಾಯಾರ್, ನಿಕಟ ಪೂರ್ವ ಅಧ್ಯಕ್ಷ ರಮೇಶ್ ನಾಯ್ಕ್, ಪೂರ್ವಾಧ್ಯಕ್ಷರಾದ ನೀಲಾನಂದ್ ನಾಯ್ಕ್, ಅರುಣ್ ಶೆಟ್ಟಿ ಪಾದೂರು, ರಾಜೇಂದ್ರ ಬಿ.ಕೆ., ಸಂದೀಪ್ ಶೆಟ್ಟಿ, ಕಾರ್ಯದರ್ಶಿ ಸುಖಲಾಕ್ಷಿ ಬಂಗೇರ, ಜೇಸಿರೆಟ್ ಅಧ್ಯಕ್ಷೆ ಶ್ರುತಿ ಎಸ್. ಶೆಟ್ಟಿ, ಯುವ ಜೇಸಿ ಅಧ್ಯಕ್ಷ ಆದಿತ್ಯ ಪಿ. ಗುರ್ಮೆ, ಪದಾದಿಕಾರಿಗಳು ಮತ್ತು ಸದಸ್ಯರು ಪಾಲ್ಗೊಂಡಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…