Featured

ಕಾಪು: ಜ.5ರಂದು ಹಳೇ ಮಾರಿಯಮ್ಮ ಸಭಾಭವನದಲ್ಲಿ ಚೆಸ್ ಟೂರ್ನಿ – vishwanews24

ಕಾಪು: ಜ.5ರಂದು ಹಳೇ ಮಾರಿಯಮ್ಮ ಸಭಾಭವನದಲ್ಲಿ ಚೆಸ್ ಟೂರ್ನಿ

ಕಾಪು: ಶ್ರೀನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು, ಹಳೇ ಮಾರಿಯಮ್ಮ ದೇವಸ್ಥಾನ ಕಾಪು ಹಾಗೂ ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಶನ್ ಆಶ್ರಯದಲ್ಲಿ 25ನೇ ಶ್ರೀನಾರಾಯಣ ಗುರು ಟ್ರೋಫಿ ಮುಕ್ತ ಹಾಗೂ ಮಕ್ಕಳ ವಯೋಮಿತಿ ವಿಭಾಗದ ಮಿಂಚಿನ ಚೆಸ್ ಟೂರ್ನಿ ಜನವರಿ 5ರಂದು ಕಾಪುವಿನ ಹಳೇ ಮಾರಿಯಮ್ಮ ಸಭಾಭವನದಲ್ಲಿ ನಡೆಯಲಿದೆ.

ಮಕ್ಕಳ ವಿಭಾಗದಲ್ಲಿ ವಯೋಮಿತಿ 7, 9, 11, 13, 17 ವರ್ಷಗಳ ವಿಭಾಗವಿದ್ದು, ಪ್ರತಿ ವಿಭಾಗದಲ್ಲಿ ಬಾಲಕರಿಗೆ 10 ಹಾಗೂ ಬಾಲಕಿಯರಿಗೆ 7 ಬಹುಮಾನಗಳಿವೆ. ಮುಕ್ತ ವಿಭಾಗದಲ್ಲಿ 15 ನಗದು ಬಹುಮಾನವಿದ್ದು, 5 ಹಿರಿಯ ಆಟಗಾರ ರಿಗೆ, 5 ಮಹಿಳಾ ಆಟಗಾರರಿಗೆ ಹಾಗೂ ಉತ್ತಮ ಶಾಲೆಗೂ ಬಹುಮಾನವಿದೆ.

ಟೂರ್ನಿಯನ್ನು ಮಂಗಳೂರು ಮಂಗಳೂರಿನ ಹಾರ್ಟ್ ಸ್ಕ್ಯಾನ್ ಫೌಂಡೇಶನ್‌ನ ಹೃದ್ರೋಗ ತಜ್ಞ ಡಾ. ಮುಕುಂದ ಕುಂಬಳೆ ಉದ್ಘಾಟಿಸಲಿದ್ದು, ಕಾಪು ಹಳೆ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪ್ರಸಾದ್ ಶೆಣ್ಣೆ ಅಧ್ಯಕ್ಷತೆ ವಹಿಸಲಿ ದ್ದಾರೆ. ಮುಖ್ಯ ಅತಿಥಿಗಳಾಗಿ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮಂಗಳೂರಿನ ಸಾಮ್ರಾಟ್ ಚೆಸ್ ಯುನಿಟ್‌ನ ಕಾರ್ಯದರ್ಶಿ ನಾಗೇಶ್ ಕಾರಂತ್, ಲಕ್ಷ್ಮೀನಾರಾಯಣ ಆಚಾರ್ಯ ಭಾಗವಹಿಸಲಿದ್ದಾರೆ.

ಸಮಾರೋಪ ಸಮಾರಂಭದ ಅಧ್ಯಕ್ಷರಾಗಿ ಕಾಪು ಗುರಿಕಾರರಾದ ಸುಧಾಕರ ಸಾಲ್ಯಾನ್ ಭಾಗವಹಿಸಲಿದ್ದು, ಬೈಲೂರು ಸರಕಾರಿ ಪ.ಪೂ. ಕಾಲೇಜಿನ ಉಪನ್ಯಾಸಕಿ ಜ್ಯೋತಿ, ಕಾಪು ಬಿಲ್ಲವರ ಸಂಘದ ಕಾರ್ಯದರ್ಶಿ ವಿಠಲ ಸಾಲ್ಯಾನ್ ಹಾಗೂ ಪಾಂಗಾಳದ ಪೆನ್ವಿಲ್ ಸೋನ್ಸ್ ಭಾಗವಹಿಸಲಿದ್ದಾರೆ.

ಟೂರ್ನಿ ಕುರಿತ ಹೆಚ್ಚಿನ ಮಾಹಿತಿಗಳಿಗಾಗಿ ದೂರವಾಣಿ ಸಂಖ್ಯೆ: 9341111024ನ್ನು ಸಂಪರ್ಕಿಸುವಂತೆ ಸಂಸ್ಥೆಯ ಅಧ್ಯಕ್ಷ ಉಮಾನಾಥ ಕಾಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

13 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

16 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

16 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

16 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

16 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

17 hours ago