Featured

ಕಾಪು : ಟಯರ್ ಸ್ಪೋಟ : ಮರದ ತುಂಡು ಸಾಗಿಸುತ್ತಿದ್ದ ಲಾರಿಗೆ ಬೆಂಕಿ – Vishwanews24

ಕಾಪು : ಟಯರ್ ಸ್ಪೋಟ : ಮರದ ತುಂಡು ಸಾಗಿಸುತ್ತಿದ್ದ ಲಾರಿಗೆ ಬೆಂಕಿ, ತಪ್ಪಿದ ಭಾರೀ ಅವಘಡ

ಕಾಪು : ತೀರ್ಥಹಳ್ಳಿಯಿಂದ ಕೇರಳಕ್ಕೆ ಮರದ ತುಂಡು ಸಾಗಿಸುತ್ತಿದ್ದ ಲಾರಿಯ ಟಯರ್ ಸ್ಪೋಟಗೊಂಡು ಬೆಂಕಿ ಹತ್ತಿದ ಘಟನೆ ಉಳಿಯಾರಗೋಳಿ ಕೋತಲಕಟ್ಟೆ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿ ೬೬ರ ಬಿಕ್ಕೋ ಕಂಪೆನಿ ಬಳಿಯಲ್ಲಿ ಘಟನೆ ಸಂಂಭವಿಸಿದ್ದು ಟಯರ್ ಸ್ಪೋಟಗೊಂಡು ಮರದ ದಿಮ್ಮಿಗೆ ಬೆಂಕಿ ಹತ್ತಿತ್ತು.

ಬೆಂಕಿಯ ಕೆನ್ನಾಲಗೆ ಲಾರಿಯತ್ತ ಚಾಚುತ್ತಿದ್ದಂತೆಯೇ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಇತರ ವಾಹನ ಸವಾರರು ಪೊಲೀಸ್ ಠಾಣೆಗೆ ಸುದ್ಧಿ ಮುಟ್ಟಿಸಿದ್ದು ಪೊಲೀಸರು ಅಗ್ನಿಶಾಮಕದಳಕ್ಕೆ ಮಾಹಿತಿ ರವಾನಿಸಿದ್ದರು.

ಅಕ್ರಮ ಕಸಾಯಿಖಾನೆ ವಿರುದ್ಧ ಕ್ರಮ.  3 ಕಡೆ ಆಸ್ತಿ ಮುಟ್ಟುಗೋಲು – Vishwanews24

ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳದ ಸಿಬಂದಿಗಳು ಮತ್ತು ಪೊಲೀಸರು ಜೊತೆಗೂಡಿ ಬೆಂಕಿಯನ್ನು ನಂದಿಸಿದ್ದು ಭಾರೀ ಪ್ರಮಾಣದ ಅವಘಡವೊಂದು ತಪ್ಪಿದಂತಾಗಿದೆ. ಘಟನೆಯಿಂದಾಗಿ ಅರ್ಧದಷ್ಟು ಮರದ ದಿಮ್ಮಿಗಳು ಬೆಂಕಿಗಾಹುತಿಯಾಗಿದ್ದು ಲಾರಿ ಕೂಡಾ ಹಾನಿಗೊಳಗಾಗಿದೆ.

ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago