ಕಾಪು: ಇನ್ನಂಜೆ ರೋಟರಿ ಸಮುದಾಯ ದಳದ ವತಿಯಿಂದ ಪಾಂಗಾಳ ತುಂಗೆರಬೈಲು ಲಕ್ಷ್ಮಣ ಪೂಜಾರಿ ಹಾಗೂ ಅವರ ಕುಟುಂಬಕ್ಕಾಗಿ ದಾನಿಗಳ ಸಹಕಾರದೊಂದಿಗೆ ನಿರ್ಮಿಸಲಾದ ‘ಕುಶಲ ನಿವಾಸ’ ಎಂಬ ನೂತನ ಮನೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ, ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಅವರು, ಮನೆ ಇಲ್ಲದವರಿಗೆ ಮನೆ ನಿರ್ಮಿಸಿ ಕೊಡುವುದು ಜೀವನದ ಅತೀ ದೊಡ್ಡ ಸೇವೆ. ಸಮಾಜದಲ್ಲಿ ದಾನಿಗಳು ಎಲ್ಲಾ ಕಡೆಗಳಲ್ಲೂ ಇರುತ್ತಾರೆ. ಆದರೆ ಆ ದಾನಿಗಳು ನೀಡುವ ದೇಣಿಗೆಯನ್ನು ಸಮರ್ಪಕವಾಗಿ ಬಳಸಿಕೊಂಡು ಜನ ಮೆಚ್ಚುವ ಸೇವೆ ನೀಡುವುದು ದೊಡ್ಡ ಸವಾಲಾಗಿದೆ. ಇಂತಹ ಸಂದರ್ಭದಲ್ಲಿ ಇನ್ನಂಜೆ ರೋಟರಿ ಸಮುದಾಯ ದಳದ ಸದಸ್ಯರು ಜೊತೆಗೂಡಿ ಮಾಡಿರುವ ಕಾರ್ಯ ಎಲ್ಲರಿಗೂ ಮಾದರಿಯಾಗಿದೆ ಎಂದರು.
ಅತಿಥಿಗಳಾಗಿ ಭಾಗವಹಿಸಿದ್ದ ರೋಟರಿ ಸಹಾಯಕ ಗವರ್ನರ್ ವಿಶ್ಲೇಶ್ ಶೆಣೈ, ರೋಟರಿ ಸಮುದಾಯದಳದ ಉಪಸಭಾಪತಿ ಗುರುಪ್ರಸಾದ್ ಕಾಮತ್, ಶಂಕರಪುರ ರೋಟರಿ ಕ್ಲಬ್ ಅಧ್ಯಕ್ಷೆ ಪ್ಯಾಟ್ರಿಕ್ ಡಿ. ಸೋಜ ಶುಭಾಶಂಸನೆಗೈದರು.
ಮನೆ ನಿರ್ಮಾಣಕ್ಕೆ ಸಹಕರಿಸಿದ ದಾನಿಗಳನ್ನು ಗೌರವಿಸಲಾಯಿತು.
ಇನ್ನಂಜೆ ರೋಟರಿ ಸಮುದಾಯ ದಳದ ಪೂರ್ವಾದ್ಯಕ್ಷ ಪ್ರಶಾಂತ್ ಶೆಟ್ಟಿ, ಪ್ರಶಾಂತ್ ಆಚಾರ್ಯ, ರವಿಪ್ರಸಾದ್ ಪೂಜಾರಿ, ಕಾರ್ಯದರ್ಶಿ ಗಣೇಶ್ ಆಚಾರ್ಯ, ಇನ್ನಂಜೆ ಗ್ರಾ.ಪಂ. ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು, ಊರಿನ ಗಣ್ಯರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಟರ್ಪಾಲಿನ ಮನೆಗೆ ಮುಕ್ತಿ
ಪಾಂಗಾಳ ತುಂಗರಬೈಲು ನಿವಾಸಿ, ಲಕ್ಷ್ಮಣ ಪೂಜಾರಿ, ತಮ್ಮ ಇಬ್ಬರು ಮಕ್ಕಳೊಂದಿಗೆ ಅಸಹಾಯಕ ರೀತಿಯಲ್ಲಿ ಟರ್ಪಾಲಿನ ಮನೆಯಲ್ಲಿ ಬದುಕುತ್ತಿದ್ದರು. ಅದೆಷ್ಟೋ ವರ್ಷಗಳ ಕಾಲ ಗಾಳಿ-ಮಳೆಗೆ ಮೈಯೊಡ್ಡಿ ದಿನ ಕಳೆಯುತ್ತಿದ್ದ ಕುಟುಂಬದ ನೆರವಿಗೆ ಬಂದ ಇನ್ನಂಜೆ ಗ್ರಾ.ಪಂ. ಅಧ್ಯಕ್ಷೆ ಮಾಲಿನಿ ಶೆಟ್ಟಿ ಅವರು, ಇನ್ನಂಜೆ ರೋಟರಿ ಸಮುದಾಯ ದಳದ ಮೂಲಕ ಸುಮಾರು 7 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಟ್ಯಾರೇಸ್ ಮನೆ ನಿರ್ಮಿಸಿ ಕೊಟ್ಟಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…