Featured

ಕಾಪು: ಅಕ್ರಮ ಮರಳು ಸಾಗಾಟ ; ಟಿಪ್ಪರ್ ಸಹಿತ ಆರೋಪಿ ಪೊಲೀಸರ ವಶಕ್ಕೆ – vishwanews24

ಕಾಪು: ಟಿಪ್ಪರ್‌ನಲ್ಲಿ ಅಕ್ರಮ ಮರಳು ಸಾಗಾಟ ಪತ್ತೆ ; ಪೊಲೀಸರ ವಶಕ್ಕೆ

ಕಾಪು: ಕಾಪು ಪಡುಗ್ರಾಮದ ಮಂಗಳೂರು ಉಡುಪಿ ರಸ್ತೆಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್‌ನ್ನು ಸೊತ್ತು ಸಮೇತವಾಗಿ ಕಾಪು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಕಾಪು ಕ್ರೈಂ ಎಸ್ಸೈ ರಮೇಶ ನಾಯ್ಕ ಅವರು ಮಂಗಳವಾರ ಮುಂಜಾನೆ ರಾತ್ರಿ ರೌಂಡ್ಸ್‌ನಲ್ಲಿದ್ದಾಗ ಉಡುಪಿ ಕಡೆಗೆ ಬರುತ್ತಿದ್ದ ಟಿಪ್ಪರ್‌ನ ಬಾಡಿಯಿಂದ ನೀರು ಇಳಿಯುತ್ತಿರುವುದು ಕಂಡು ಬಂದಿದ್ದು ವಾಹನದಲ್ಲಿ ಮರಳನ್ನು ಸಾಗಿಸುತ್ತಿರಬಹುದು ಎಂಬ ಅನುಮಾನದಿಂದ ಟಿಪ್ಪರ್‌ನ ಚಾಲಕನಲ್ಲಿ ವಾಹನವನ್ನು ನಿಲ್ಲಿಸುವಂತೆ ಸೂಚಿಸಿದಾಗ ಚಾಲಕನು ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದನು. ವಾಹನವನ್ನು ಪರಿಶೀಲಿಸಿದಾಗ ಅದರಲ್ಲಿ ಬಾಡಿಯ ಮಟ್ಟದವರೆಗೆ ಮರಳನ್ನು ತುಂಬಿಸಿರುವುದು, ಆ ಮರಳಿನಿಂದ ನೀರು ಇಳಿಯುತ್ತಿರುವುದು ಕಂಡು ಬಂದಿತ್ತು.

ಟಿಪ್ಪರ್‌ ಮತ್ತು ಅದರಲ್ಲಿದ್ದ ಸುಮಾರು 15,000 ರೂಪಾಯಿ ಬೆಲೆ ಬಾಳುವ ಮರಳಿನ ಜತೆಗೆ ಚಾಲಕ ಶಿವಮೊಗ್ಗ ಮೂಲದ ಮೃತ್ಯುಂಜಯ ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಚಾಲಕ ಮತ್ತು ವಾಹನದ ಮಾಲಕ ಪಡುಬಿದ್ರಿ ನಿವಾಸಿ ಮಯ್ಯದ್ದಿ ಹುಸೇನ್‌ ಎಂಬಾತನ ವಿರುದ್ಧ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

3 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

9 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

9 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

10 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

12 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

12 hours ago