ಕಾಪು : ಇನ್ನಂಜೆ – ಕಲ್ಲುಗುಡ್ಡೆ ರಸ್ತೆಯಲ್ಲಿ ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಬೈಕ್ ಸವಾರ ಕಾಪು ಕೋತಲಕಟ್ಟೆ ದಂಡತೀರ್ಥ ನಿವಾಸಿ ಸುನೀಲ್ ಕುಮಾರ್ (32) ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.
ಇನ್ನಂಜೆ – ಕಲ್ಲುಗುಡ್ಡೆ – ಬಂಟಕಲ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಟಿಪ್ಪರ್ ನ ಹಿಂಬದಿಯ ಚಕ್ರದಡಿಗೆ ಸಿಲುಕಿದ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ತಲೆಗೆ ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಕಾಪು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಅಪಘಾತಕ್ಕೊಳಗಾದ ಬೈಕ್ ಮತ್ತು ಅಪಘಾತಕ್ಕೆ ಕಾರಣವಾದ ಟಿಪ್ಪರ್ ಲಾರಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…