Featured

ಕಾಪು: ಟೋಲ್ ಗೇಟ್ ರದ್ಧು – ಆ. 21 ರಂದು ಕಂಚಿನಡ್ಕದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ  : ವಿನಯ್ ಕುಮಾರ್‌ ಸೊರಕೆ – vishwanews24

ಕಾಪು: ಟೋಲ್ ಗೇಟ್ ರದ್ಧು – ಆ. 21 ರಂದು ಕಂಚಿನಡ್ಕದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ  : ವಿನಯ್ ಕುಮಾರ್‌ ಸೊರಕೆ

ಕಾಪು: ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಟೋಲ್ ಗೇಟ್ ರದ್ಧು ಮತ್ತು ಈ ರಸ್ತೆಯಲ್ಲಿ ಟೋಲ್ ಸ್ಥಾಪನೆ ಹುನ್ನಾರವನ್ನು ಖಂಡಿಸಿ, ಸರಕಾರದ ಗಮನ ಸೆಳೆಯುವ ಉದ್ದೇಶದೊಂದಿಗೆ‌ ಆ. 21 ರಂದು ಬೆಳಿಗ್ಗೆ 10 ಗಂಟೆಗೆ ಕಂಚಿನಡ್ಕದಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಮಾಜಿ ಸಚಿವ ವಿನಯ್ ಕುಮಾರ್‌ ಸೊರಕೆ ಹೇಳಿದ್ದಾರೆ.

ಕಾಪು ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೃಹತ್ ಪ್ರತಿಭಟನೆಯ ಬಳಿಕ‌ ಆ.‌22 ರಂದು ಬೆಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಸಹಿತ ವಿವಿಧ ಸಚಿವರನ್ನೊಳಗೊಂಡ ನಿಯೋಗದೊಂದಿಗೆ ಮುಖ್ಯಮಂತ್ರಿಗಳ ಬಳಿ ತೆರಳಿ ಮನವಿ ಸಲ್ಲಿಸಲಾಗುವುದು ಎಂದರು.
ಪ್ರತಿಭಟನೆಗೆ ಸಾರ್ವಜನಿಕರ ಸಹಿತವಾಗಿ ಕಾಪು ಬ್ಲಾಕ್ ಕಾಂಗ್ರೆಸ್ ನ ದಕ್ಷಿಣ ಮತ್ತು‌ ಉತ್ತರ ವಿಭಾಗ, ಜಿಲ್ಲಾ ಕಾಂಗ್ರೆಸ್ ಮತ್ತು ಜಿಲ್ಲೆಯ‌ ಎಲ್ಲಾ‌ ಬ್ಲಾಕ್ ಗಳ‌ ಸಹಭಾಗಿತ್ವದೊಂದಿಗೆ ಈ ಪ್ರತಿಭಟನೆ ನಡೆಯಲಿದ್ದು ಈ ಮೂಲಕ ಸರಕಾರಕ್ಕೆ ಒತ್ತಡ ತರುವ ಪ್ರಯತ್ನ ನಡೆಸಲಾಗುವುದು ಎಂದರು.‌

ಕಾರ್ಕಳ – ಪಡುಬಿದ್ರಿ ರಾಜ್ಯ ಹೆದ್ದಾರಿಯ ಶೇ.80 ರಷ್ಟು ರಸ್ತೆಯು ಕಾರ್ಕಳ ಭಾಗಕ್ಕೆ ಸೇರಿದೆ. ಯಡಿಯೂರಪ್ಪ ಸರಕಾರ ಇರುವಾಗ ಆರಂಭಗೊಂಡ ಪ್ರಕ್ರಿಯೆ ಇದಾಗಿದ್ದು ಬೆಳ್ಮಣ್ ನಲ್ಲಿ ಟೋಲ್ ಹೋರಾಟಗಾರರ ಪ್ರತಿಭಟನೆಗೆ ಮಣಿದು ಬೊಮ್ಮಾಯಿ ಸರಕಾರ ಅದನ್ನು ಕಂಚಿನಡ್ಕಕ್ಕೆ ರವಾನಿಸಿದೆ. ಈಗ ಇಲ್ಲಿಂದಲೇ ಓಡಿಸುವ‌ ಉದ್ದೇಶಕ್ಕಾಗಿ ಈ ಹೋರಾಟ ನಡೆಯಲಿದೆ ಎಂದರು.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago