Featured

ಕಾಪು : ಡಿ.16,17,18ರಂದು ಕಡಲ ಐಸಿರ ಬೀಚ್ ಫೆಸ್ಟ್ – 2022 :- Vishwanews24

ಕಾಪು : ಡಿ.16,17,18ರಂದು ಕಡಲ ಐಸಿರ ಬೀಚ್ ಫೆಸ್ಟ್ -2022

ಕಾಪು: ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಕ್ಲಬ್ ಕಾಪು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಪು ಪಡು ಮತ್ತು ದಿ. ಆರ್.ಡಿ. ಮೆಂಡನ್ ಕಾಪು ಸ್ಮರಣಾರ್ಥ ಜನ್ಮ ಶತಮಾನೋತ್ಸವ ಆಚರಣಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್16, 17 ಮತ್ತು 18 ರಂದು ಕಾಪು ಬೀಚ್ ನಲ್ಲಿ ಕಡಲ ಐಸಿರ ಬೀಚ್ ಫೆಸ್ಟ್ – 2022 ನಡೆಯಲಿದೆ .

ಕಡಲ ಐಸಿರ ಕಾರ್ಯಕ್ರಮದ ಪ್ರಯುಕ್ತ ಗ್ರಾಮೀಣ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ, ನೂತನ ಶಾಲಾ ವಾಹನ ಖರೀದಿ, ಸಂಸ್ಥೆಗೆ ನೂತನ ಕಟ್ಟಡ ನಿರ್ಮಾಣ ಹಾಗೂ ಇತರ ಸಮಾಜ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಡಿ. 16 ರಂದು ಉದ್ಘಾಟನಾ ಸಮಾರಂಭ ನಡೆಯಲಿದ್ದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶಾಲಾ ವಾರ್ಷಿಕೋತ್ಸವ ನಡೆಯಲಿದೆ. ಡಿ.17 ರಂದು ರಾಜ್ಯ ಮಟ್ಟದ ಸಮೂಹ ನೃತ್ಯ ಸ್ಪರ್ಧೆ, ಫಲಪುಷ್ಪ ಕಲಾ ಸ್ಪರ್ಧೆ, ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ಚಿತ್ರ ಬಿಡಿಸುವ ಸ್ವರ್ಧೆ, ಬಲೆ ಬೀಸಿ ಮೀನು ಹಿಡಿಯುವುದು, ಗಾಳ ಹಾಕಿ ಮೀನು ಹಿಡಿಯುವುದು, ಮಹಿಳೆಯರಿಗಾಗಿ ಸಂಗೀತ ಕುರ್ಚಿ, ಬಾಳೆ ಹಣ್ಣು ತಿನ್ನುವುದು, ಬಾಟಲ್ ಬ್ಯಾಲೆನ್ಸ್ ಸ್ಪರ್ಧೆ ಮತ್ತು ತ್ರೋಬಾಲ್ ಪಂದ್ಯಾಟ ನಡೆಯಲಿದೆ.

ಡಿ. 18 ರಂದು ಚೆಂಡೆ ಸ್ಪರ್ಧೆ, ಬೀಚ್ ವಾಲಿಬಾಲ್ ಸ್ಪರ್ಧೆ, ಕೊಳಲು ಮತ್ತು ತಬಲ ತಂಡ ಸ್ಪರ್ಧೆ, ಶ್ವಾನ ಸ್ಪರ್ಧೆ, ಈಜು ಸ್ಪರ್ಧೆ, ಮರಳಿನಲ್ಲಿ ಕಲಾಕೃತಿ, ಹುಟ್ಟು ದೋಣಿ ಸ್ಪರ್ಧೆ, ಗಾಳಿ ಪಟ ಸ್ಪರ್ಧೆ ಮತ್ತು ಪ್ರದರ್ಶನ ನಡೆಯಲಿದೆ.

ವಿಶೇಷ ಆಕರ್ಷಣೆಯಾಗಿ ಕರಾವಳಿ ಶೈಲಿಯ ಪುಡ್ ಪೆಸ್ಟಿವಲ್, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕಲಾವಿದರಿಂದ ಸಂಗೀತ ರಸಮಂಜರಿ, ವೈಶಿಷ್ಡ್ಯ ಪೂರ್ಣವಾಗಿ ಕಾಪು ದೀಪಸ್ತಂಭದ ಆವರಣದಲ್ಲಿ ಲೇಸರ್ ಶೋ, ಆಕರ್ಷಕ ಸುಡುಮದ್ದು ಪ್ರದರ್ಶನ ನಡೆಯಲಿದೆ.

 

Vishwa News 24

Recent Posts

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – vishwanews24

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…

5 minutes ago

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…

15 minutes ago

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

12 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

18 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

18 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

20 hours ago