ಕಾಪು: ಡೀಸೆಲ್ – ಪೆಟ್ರೋಲ್ ದರ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪು ಪೆಟ್ರೋಲ್ ಬಂಕ್ ಮುಂಭಾಗ ಪ್ರತಿಭಟನೆ ನಡೆಯಿತು.
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೋವಿಡ್ ಸಮಯದಲ್ಲಿ ಯಾವ ಮುಲಾಜಿಯಿಲ್ಲದೆ ಪೆಟ್ರೋಲ್ – ಡೀಸೆಲ್, ಗ್ಯಾಸ್, ವಿದ್ಯುತ್ ದರ ಏರಿಸುವ ಮುಖಾಂತರ ಗಾಯದ ಮೇಲೆ ಬರೆ ಹಾಕುವ ಕೆಲಸ ಬಿಜೆಪಿ ಮಾಡುತ್ತಿದೆ. ಯುಪಿಎ ಸರಕಾರದ ಅವಧಿಯಲ್ಲಿ ಪೈಸೆಯ ಬೆಲೆ ಏರಿಕೆಯಾದಾಗ ಗರಿ ಗರಿ ಸೀರೆ ಹಾಕಿಕೊಂಡು ರಸ್ತೆಯಲ್ಲಿ ಉರುಳಾಡಿದ ಸಂಸದೆ ಶೋಭಾ ಕರಂದ್ಲಾಜೆ ಅವರು ಈಗ ಎಲ್ಲಿ ಹೋಗಿದ್ದಾರೆ ಎಂದು ಪ್ರಶ್ನಿಸಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರಕಾರ ಕೇವಲ ಪೆಟ್ರೋಲ್- ಡೀಸೆಲ್ ದರ ಏರಿಸದೇ, ದಿನಂಪ್ರತಿ ಬಳಸುವ ಎಲ್ಲಾ ಸಾಮಾಗ್ರಿಗಳ ದರ ಏರಿಸುವ ಮುಖಾಂತರ ಜನರಿಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದರು.
ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಕೆಪಿಸಿಸಿ ಮುಖಂಡರಾದ ಎಂ.ಎ. ಗಫೂರ್, ನವೀನ್ ಚಂದ್ರ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೈನ್, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ ಮೊದಲಾದವರು ಮಾತನಾಡಿದರು.
ಪಕ್ಷದ ಮುಖಂಡರಾದ ಗೀತಾ ವಾಗ್ಲೆ, ಪ್ರಶಾಂತ್ ಜತ್ತನ್ನ, ಮಹಮ್ಮದ್ ಫಾರೂಖ್, ರಮೀಜ್ ಹುಸೇನ್, ಸೌರಬ್ ಬಲ್ಲಾಳ್, ವೈ. ಸುಕುಮಾರ್, ಶರ್ಫುದ್ದೀನ್ ಶೇಖ್, ವೈ. ಸುಧೀರ್ ಕುಮಾರ್, ಯು.ಸಿ. ಶೇಖಬ್ಬ, ಮಹಮ್ಮದ್ ಸಾಧಿಕ್ ದೀನಾರ್, ನವೀನ್ ಎನ್. ಶೆಟ್ಟಿ, ಶಶಿಧರ್ ಶೆಟ್ಟಿ, ಶೇಖರ್ ಕೋಟ್ಯಾನ್, ಅಬ್ದುಲ್ ಅಜೀಜ್, ಶಿವಾಜಿ ಸುವರ್ಣ, ಕೇಶವ ಹೆಜಮಾಡಿ, ಹಸನಬ್ಬ ಶೇಖ್, ಹರೀಶ್ ನಾಯಕ್, ಅಮೀರುದ್ದೀನ್ ಕಾಪು, ಪ್ರಭಾ ಬಿ. ಶೆಟ್ಟಿ, ದಯಾನಂದ ಬಂಗೇರ, ಮಾಧವ ಪಾಲನ್, ಗಣೇಶ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.
ಕಟಪಾಡಿಯಲ್ಲಿ ಪ್ರತಿಭಟನೆ: ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಕಟಪಾಡಿ ಜಂಕ್ಷನ್ ಬಳಿ ಇರುವ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಡೀಸಲ್, ಗ್ಯಾಸ್ ಬೆಲೆ ಏರಿಕೆ ವಿರುದ್ಧ ಸೌಟು, ಬಟ್ಟಲು, ಲಟ್ಟಣಿಗೆ ಹಿಡಿದು ಪ್ರತಿಭಟನೆ ನಡೆಯಿತು.
ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ, ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಭಾ ಬಿ ಶೆಟ್ಟಿ, ಪ್ರಮುಖರಾದ ಆಗ್ನೆಸ್ ಡೇಸ್, ಸುಗುಣ, ಆಶಾ ಅಂಚನ್, ಪ್ಲಾವಿಯ, ಸಬಿತ, ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…