ಕಾಪು: ಕಾಪು ಕಡಲ ಕಿನಾರೆಯಲ್ಲಿ ಅಕ್ರಮ ಪಾಚ್ಚಾಲೆ (ಅಜಿರ್ ) ತೆಗೆಯುತ್ತಿದ್ದ ತಮಿಳುನಾಡು ಮೂಲದ ಮೀನುಗಾರ ದೋಣಿ ಗುದ್ದಿದ ಪರಿಣಾಮ, ಸ್ಥಳೀಯ ಮೀನುಗಾರ ದೋಣಿ ಮುಗುಚಿ ಇಬ್ಬರು ಮೀನುಗಾರರು ನೀರಿಗೆ ಬಿದ್ದು ಒಬ್ಬನನ್ನು ರಕ್ಷಿಸಲಾಗಿದ್ದು ಇನ್ನೊಬ್ಬ ಮೀನುಗಾರ ನಾಪತ್ತೆಯಾದ ಘಟನೆ ಸಂಭವಿಸಿದೆ.
ಕಳೆದ ಕೆಲವು ದಿನಗಳಿಂದ ತಮಿಳುನಾಡು ಮೂಲದ ಮೀನುಗಾರರು ಅಕ್ರಮ ಅಜ್ಞರು ಮೀನುಗಾರಿಕೆ ಮಾಡುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಮೀನುಗಾರರು ಸಣ್ಣ ದೋಣಿಯಲ್ಲಿ ತೆರಳಿ ತಮಿಳುನಾಡು ಮೂಲದ ಮೀನುಗಾರರ ಜೊತೆ ಮೀನುಗಾರಿಕೆ ಮಾಡದಂತೆ ಮನವಿ ಮಾಡಲು ಮುಂದಾಗಿದ್ದರು.
ಇದನ್ನೂ ಓದಿ:
ಈ ವೇಳೆ ತಮಿಳುನಾಡಿನ ದೊಡ್ಡ ದೋಣಿಯನ್ನು ಸ್ಥಳೀಯ ಮೀನುಗಾರರ ಸಣ್ಣ ದೋಣಿಗೆ ಉದ್ದೇಶಪೂರ್ವಕ ಡಿಕ್ಕಿ ಹೊಡೆಸಿದ್ದಾರೆ.ಈ ವೇಳೆ ಕಾಪು ಮೂಲದ ದೋಣಿ ಮುಗುಚಿ ಬಿದ್ದು ಇಬ್ಬರು ಮೀನುಗಾರರು ನೀರಿಗೆ ಬಿದ್ದಿದ್ದು ಒಬ್ಬನನ್ನು ರಕ್ಷಿಸಲಾಗಿದ್ದು ಇನ್ನೊಬ್ಬ ಮೀನುಗಾರ ನಾಪತ್ತೆ ಯಾಗಿದ್ದಾನೆ.
ಘಟನೆ ಬಳಿಕ ತಮಿಳುನಾಡು ಮೂಲದ ಮೀನುಗಾರರು ಮಲ್ಪೆಯತ್ತ ಪಲಾಯನ ಮಾಡಿದ್ದಾಗಿ ಸ್ಥಳೀಯರು ದೂರಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…