ಕಾಪು: ತಾಲೂಕಿನಲ್ಲಿ ಭಾರೀ ಗಾಳಿ ಮತ್ತು ಮಳೆಯಿಂದಾಗಿ ಕಳೆದ ಎರಡು ದಿನಗಳಲ್ಲಿ ಹತ್ತಕ್ಕೂ ಅಧಿಕ ಮನೆಗಳಿಗೆ ಹಾನಿಯುಂಟಾಗಿದ್ದು ಲಕ್ಷಾಂತರ ರೂಪಾಯಿ ಮೊತ್ತದ ಸೊತ್ತು ನಷ್ಟವುಂಟಾಗಿದೆ.
ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ಮತ್ತೆ ನೆರೆಯ ಭೀತಿ ಎದುರಾಗಿದೆ. ಇನ್ನಂಜೆ – ಮರ್ಕೋಡಿ ಹೊಳೆ ಬಳಿ, ಕಾಪು ಜನಾರ್ದನ ದೇವಸ್ಥಾನದ ಬಳಿ, ಮಲ್ಲಾರು – ಮೂಳೂರು – ಬೆಳಪು ಬೈಲ್, ಉಳಿಯಾರಗೋಳಿ ಕೈಪುಂಜಾಲು ಬೈಲು ಮುಳುಗಡೆಯಾಗಿದೆ.
ಕಳೆದ ಎರಡು ವಾರಗಳ ಹಿಂದೆ ನಿರಂತರ ಮಳೆಯಿಂದಾಗಿ ನೆರೆ ಕಂಡು ಬಂದಿದ್ದ ತಗ್ಗು ಪ್ರದೇಶಗಳಲ್ಲಿ ನೆರೆ ಇಳಿಮುಖವಾದ ಬಳಿಕ ಭತ್ತದ ಕೃಷಿ ಕೆಲಸಗಳು ಬಿರುಸಿನಿಂದ ನಡೆದಿದ್ದವು. ಆದರೆ ಇದೀಗ ಮತ್ತೆ ಭಾರೀ ಮಳೆ ಸುರಿದ ಪರಿಣಾಮ ಭತ್ತದ ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿದ್ದು ನೂರಾರು ಹೆಕ್ಟೇರ್ ಕೃಷಿ ಗದ್ದೆಗಳಲ್ಲಿ ನಡೆಸಲಾಗಿರುವ ಭತ್ತದ ನಾಟಿ ಕೊಳೆಯುವ ಭೀತಿ ಎದುರಾಗಿದೆ. ಕೃಷಿ ಕಾರ್ಯಕ್ಕೆ ಕೆಲಸದವರ ಕೊರತೆ, ದುಬಾರಿ ವೆಚ್ಚದ ನಡುವೆ ಕೃಷಿ ಕಾರ್ಯ ಮಾಡುವ ಕೃಷಿಕರಿಗೆ ವರುಣನ ಕಣ್ಣ ಮುಚ್ಚಾಲೆ ಆಟಕ್ಕೆ ಕಂಗಲಾಗಿದ್ದಾರೆ.
ಮಳೆ ಹಾನಿ ಮತ್ತು ನೆರೆ ಪೀಡಿತ ಪ್ರದೇಶಗಳಿಗೆ ಕಾಪು ಶಾಸಕರು, ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಭೇಟಿ ನೀಡಿ ಹಾನಿ ಪರಿಶೀಲನೆ ನಡೆಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…