ಕಾಪು ತಾಲೂಕಿನ ಬೆಳಪು ಗ್ರಾಮದ ವ್ಯಕ್ತಿಯೋರ್ವರಿಗೆ ಕೊರೋನಾ ಪಾಸಿಟಿವ್- ಕಂಟೈನ್ಮೆಂಟ್ ವಲಯ ಘೋಷಣೆ: vishwanews24

ಕಾಪು: ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆಯಾಗಿ ಮನೆಗೆ ಬಂದಿದ್ದ ಕಾಪು ತಾಲೂಕಿನ ಬೆಳಪು ಗ್ರಾಮದ ವ್ಯಕ್ತಿಯೋರ್ವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

ಈ ಸಂಬಂಧ ರವಿವಾರ ಬೆಳಪು ಗ್ರಾಮದ ನಿಗದಿತ ಪ್ರದೇಶಕ್ಕೆ ಆಗಮಿಸಿದ ತಾಲೂಕು ಮಟ್ಟದ ಅಧಿಕಾರಿಗಳು ಕೋವಿಡ್-19 ಪಾಸಿಟಿವ್ ಪತ್ತೆಯಾದ ವ್ಯಕ್ತಿಯ ಮನೆ ಪರಿಸರವನ್ನು ಸೀಲ್ ಡೌನ್ ಮಾಡಲಾಗಿದೆ.

ಮಹಾರಾಷ್ಟ್ರದಿಂದ ಕುಟುಂಬ ಸಮೇತ ಆಗಮಿಸಿದ್ದ ಇವರು ಕಾಪುವಿನಲ್ಲಿ ಸರಕಾರಿ ಕ್ವಾರಂಟೈನ್ ಮುಗಿಸಿ ಎರಡು ದಿನದ ಹಿಂದೆ ಮನೆಗೆ ಆಗಮಿಸಿದ್ದರು. ಮನೆಗೆ ಬಂದ ಎರಡನೇ ದಿನದಲ್ಲೇ ಕೋವಿಡ್ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿದೆ.

ಅಧಿಕಾರಿಗಳಿಂದ ಪರಿಶೀಲನೆ: ಜಿಲ್ಲಾಡಳಿತದ ನಿರ್ದೇಶನದಂತೆ ಕಾಪು ತಹಶೀಲ್ದಾರ್ ಮಹಮ್ಮದ್ ಇಸಾಕ್, ಕಂದಾಯ ನಿರೀಕ್ಷಕ ಕೆ. ರವಿಶಂಕರ್, ಶಿರ್ವ ಎಸ್ಸೈ ಶ್ರೀಶೈಲ ಮುರುಗೋಡ, ಬೆಳಪು ಗ್ರಾ.ಪಂ.‌ಅಭಿವೃದ್ದಿ ಅಧಿಕಾರಿ ಎಚ್.ಆರ್. ರಮೇಶ್, ಗ್ರಾಮಕರಣಿಕ ಗಣೇಶ್ ಕುಮಾರ್, ಅರುಣ್ ಕುಮಾರ್ ಮೊದಲಾದವರು ಭೇಟಿ ನೀಡಿ, ಕಂಟೈನ್ಮೆಂಟ್ ವಲಯವನ್ನು ಪರಶೀಲಿಸಿದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

8 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

8 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

9 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

9 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

10 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

10 hours ago