ಕಾಪು ತಾಲೂಕಿನ ಮೂಳೂರು ಸಮೀಪ 250 ಎಕರೆ ಭೂಮಿ ಕೈಗಾರಿಕೆಗೆ ಶೀಘ್ರ ಸ್ವಾಧೀನ : ಸಚಿವ ಜಗದೀಶ್ ಶೆಟ್ಟರ್
ಕಾಪು: ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಹೂಡಿಕೆದಾರರು ಉತ್ಸುಕರಾಗಿದ್ದಾರೆ. ಆ ಹಿನ್ನೆಲೆಯಲ್ಲಿ ಕಾಪು ತಾಲೂಕಿನ ಮೂಳೂರು ಸಮೀಪ 250 ಎಕರೆ ಹಾಗೂ ದ.ಕ. ಜಿಲ್ಲೆಯ ಮುಲ್ಕಿ ಸಮೀಪದ ಬಳ್ಳುಂಜೆ ಎಂಬಲ್ಲಿ 800 ಎಕರೆ ಜಾಗವನ್ನು ಸ್ವಾಧೀನ ಪಡಿಸಲು ಪ್ರಸ್ತಾವನೆ ಬಂದಿದೆ. ಆದಷ್ಟು ಬೇಗ ಆ ಜಾಗವನ್ನು ಸ್ವಾಧೀನ ಮಾಡಲಾ ಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಬೆಳಪು ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಆಕ್ಸಿಜನ್ ಘಟಕಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡುತಿದ್ದರು.
ಬೆಂಗಳೂರು ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಕೈಗಾರಿಕೆ ಬೆಳವಣಿಗೆ ಆಗಬೇಕೆಂಬುದು ನಮ್ಮ ಗುರಿಯಾಗಿದೆ. ಆ ಗುರಿಯನ್ನು ಸಾಧಿಸಲು ಹೊಸ ಕೈಗಾರಿಕಾ ನೀತಿಯಲ್ಲಿ ಅವಕಾಶ ಮಾಡಿಕೊಡಲಾಗಿದೆ. ಕಳೆದ ಎರಡು ವರ್ಷ ಗಳಿಂದ ಬೆಂಗಳೂರು ಹೊರತು ಪಡಿಸಿ ಉಳಿದ ಕಡೆಗಳಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ ಮಂಜೂರಾತಿ ನೀಡಲಾಗಿದೆ. ಮಂಗಳೂರು, ಯಾದಗಿರಿ, ಕೊಪ್ಪಳ, ಬೆಳಗಾವಿ ಹುಬ್ಬಳ್ಳಿ ಧಾರವಾಡ ಸೇರಿದಂತೆ ಹಲವು ಕಡೆಗಳಲ್ಲಿ ಕೈಗಾರಿಕೆ ಸ್ಥಾಪಿಸಲು ದೊಡ್ಡ ಪ್ರಮಾಣದಲ್ಲಿ ಹೂಡಿಕೆದಾರರು ಮುಂದೆ ಬರುತ್ತಿದ್ದಾರೆ ಎಂದರು.
ಬೆಳಪುವಿನಲ್ಲಿ ಸ್ಥಾಪಿಸಲಾದ ಆಕ್ಸಿಜನ್ ಘಟಕದಿಂದ ಈ ಭಾಗದಲ್ಲಿ ಕೊರೋನ ನಿಯಂತ್ರಿಸಲು ಹಾಗೂ ಸಾಕಷ್ಟು ಆಕ್ಸಿಜನ್ ಬಳಕೆ ಮಾಡಲು ಸಾಧ್ಯ ವಾಗಿದೆ. ಕೊರೋನದಿಂದ ಕೈಗಾರಿಕಾ ಬೆಳವಣಿಗೆಗೆ ಸಾಕಷ್ಟು ಅಡ್ಡಿಯಾಗಿದ್ದು, ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆ ಅತಿ ಹೆಚ್ಚು ಆಗುತ್ತಿದೆ.ಕೊರೋನ ಶೂನ್ಯಕ್ಕೆ ಬಂದರೆ ಕೈಗಾರಿಕೆ ಬೆಳವಣಿಗೆ ಇನ್ನಷ್ಟು ದೊಡ್ಡ ಪ್ರಮಾಣದಲ್ಲಿ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ಹೊಸ ಕೈಗಾರಿಕಾ ನೀತಿಯಂತೆ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವ ಬಗ್ಗೆ ಒಪ್ಪಂದ ಪತ್ರದಲ್ಲಿ ಷರತ್ತು ವಿಧಿಸಲಾಗಿದೆ. ಅದೇ ರೀತಿ ಎಲ್ಲ ಕೈಗಾರಿಕೆಗಳಲ್ಲಿ ಪ್ರಮುಖ ಕೆಲಸಗಳನ್ನು ಕನ್ನಡಿಗರಿಗೆ ನೀಡಬೇಕು. ಕೆಲಸ ನೀಡದ ಬಗ್ಗೆ ದೂರು ಬಂದರೆ ತನಿಖೆ ನಡೆಸಿ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.
ಈ ಸಂದರ್ಭದಲ್ಲಿ ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಉಡುಪಿ ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ಎಸ್.ಎನ್. ಕೈಯೋಜನಿಕ್ಸ್ ಪ್ರೈವೇಟ್ ಲಿಮಿಟೆಡ್ ಆಡಳಿತ ನಿರ್ದೇಶಕ ಕೆ.ನಟರಾಜ್ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…