Featured

ಕಾಪು: ತಾಲೂಕು ಕನ್ನಡ ಜಾನಪದ ಪರಿಷತ್‌ನ ಅಧ್ಯಕ್ಷರಾಗಿ ಪತ್ರಕರ್ತ, ಸಿನೆಮಾ ನಿರ್ದೇಶಕ ಪ್ರಕಾಶ ಸುವರ್ಣ ಕಟಪಾಡಿ ಆಯ್ಕೆ -Vishwanews24

ಕಾಪು: ತಾಲೂಕು ಕನ್ನಡ ಜಾನಪದ ಪರಿಷತ್‌ನ ಅಧ್ಯಕ್ಷರಾಗಿ ಪತ್ರಕರ್ತ, ಸಿನೆಮಾ ನಿರ್ದೇಶಕ ಪ್ರಕಾಶ ಸುವರ್ಣ ಕಟಪಾಡಿ ಆಯ್ಕೆ -Vishwanews24

ಕಾಪು: ತಾಲೂಕು ಕನ್ನಡ ಜಾನಪದ ಪರಿಷತ್‌ನ ಅಧ್ಯಕ್ಷರಾಗಿ ಪತ್ರಕರ್ತ, ಸಿನೆಮಾ ನಿರ್ದೇಶಕ ಪ್ರಕಾಶ ಸುವರ್ಣ ಕಟಪಾಡಿ ಅವರನ್ನು ಆಯ್ಕೆ ಮಾಡಲಾಗಿದೆ.

ಇವರನ್ನು ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಗಣೇಶ್ ಗಂಗೊಳ್ಳಿ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯಾಧ್ಯಕ್ಷ ಡಾ.ಬಾಲಾಜಿ ಎಸ್. ಆಯ್ಕೆಮಾಡಿದ್ದು, ಪರಿಷತ್‌ನ ಗೌರವಾಧ್ಯಕ್ಷರಾಗಿ ಉದ್ಯಮಿ ಕೆ.ಸತ್ಯೇಂದ್ರ ಪೈ ಕಟಪಾಡಿ, ಗೌರವ ಸಲಹೆಗಾರರಾಗಿ ಹಿರಿಯ ಚಿಂತಕ ಬಿ.ಪುಂಡಲೀಕ ಮರಾಠೆ ಶಿರ್ವ, ಪ್ರಧಾನ ಕಾರ್ಯದರ್ಶಿಯಾಗಿ ಭುವನೇಶ್ ಪ್ರಭು ಹಿರೇಬೆಟ್ಟು, ಜತೆ ಕಾರ್ಯದರ್ಶಿಯಾಗಿ ಕಲಾವಿದೆ ಪವಿತ್ರ ಶೆಟ್ಟಿ ಕಟಪಾಡಿ ಅವರನ್ನು ಆಯ್ಕೆ ಮಾಡಲಾಗಿದೆ.

ಇನ್ನು ಪರಿಷತ್‌ನ ಕೋಶಾಧಿಕಾರಿಯಾಗಿ ರಂಗನಟ ಕೆ.ನಾಗೇಶ್ ಕಾಮತ್ ಕಟಪಾಡಿ, ಮಾಧ್ಯಮ ಕಾರ್ಯದರ್ಶಿಯಾಗಿ ಪತ್ರಕರ್ತ ರಾಕೇಶ್ ಕುಂಜೂರ್, ಸಂಘಟನಾ ಕಾರ್ಯದರ್ಶಿಯಾಗಿ ರಾಘವೇಂದ್ರ ಪ್ರಭು ಕರ್ವಾಲ್, ಸಂಚಾಲಕರಾಗಿ ಉಡುಪಿ ಬಾಲಕಿಯರ ಪದವಿಪೂರ್ವ ಕಾಲೇಜು ಉಪನ್ಯಾಸಕ ದಯಾನಂದ ಡಿ, ಸಂಪಾದಕರಾಗಿ ಯುವಸಾಹಿತಿ ದೀಪಕ್ ಕೆ. ಬೀರ ಪಡುಬಿದ್ರಿ, ಸಮಿತಿ ಸದಸ್ಯರಾಗಿ ಸಮಾಜಸೇವಕ ಸುನೀಲ್ ಜಾನ್ ಡಿಸೋಜಾ ಶಂಕರಪುರ, ಜಾನಪದ ಕಲಾವಿದ ಹರೀಶ್ ಹೇರೂರು, ಆಕಾಶವಾಣಿ ಕಲಾವಿದೆ ಭಾಗ್ಯಲಕ್ಷ್ಮೀ ಉಪ್ಪೂರು, ಶಂಕರ್ ಶೇರಿಗಾರ್ ಮಟ್ಟು, ನ್ಯತ್ಯಕಲಾವಿದೆ ಕಾವ್ಯ ಪೈ ಕುತ್ಯಾರು, ಗೀತಾ ಆಚಾರ್ಯ ಕಾಪು, ಲಕ್ಷ್ಮಣ್ ಟಿ ಕಟಪಾಡಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ವಿಭಾಗೀಯ ಸಂಚಾಲಕಿ ಡಾ.ಭಾರತಿ ಮರವಂತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

2 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

3 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

3 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

3 hours ago