ಕಾಪು : ತಾಲೂಕು ವ್ಯಾಪ್ತಿಯಲ್ಲಿ ಸ್ಮಶಾನದ ಜಮೀನಿಗೆ ಅರ್ಜಿ ಸಲ್ಲಿಸಿ – Vishwanews24

Featured, ಉಡುಪಿ

ಕಾಪು : ತಾಲೂಕು ವ್ಯಾಪ್ತಿಯಲ್ಲಿ ಸ್ಮಶಾನದ ಜಮೀನಿಗೆ ಅರ್ಜಿ ಸಲ್ಲಿಸಿ

ಉಡುಪಿ : ಜಿಲ್ಲೆಯ ಎಲ್ಲಾ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನ ಭೂಮಿ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದ್ದು, ಕಾಪು ತಾಲೂಕು ವ್ಯಾಪ್ತಿಯ ಗ್ರಾಮಗಳ ಸಾರ್ವಜನಿಕ ಸ್ಥಳಗಳಲ್ಲಿ ಸ್ಮಶಾನ ನಿರ್ಮಾಣಕ್ಕೆ ಜಮೀನಿನ ಅವಶ್ಯಕತೆ ಇದ್ದಲ್ಲಿ ಬೇಡಿಕೆಗಳನ್ನು ತಾಲೂಕು ತಹಶೀಲ್ದಾರರು ಅಥವಾ ಗ್ರಾಮ ವ್ಯಾಪ್ತಿಯ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ.

ಸ್ಮಶಾನ ಭೂಮಿ ಅವಶ್ಯಕತೆಯ ಬಗ್ಗೆ ಅರ್ಜಿ ಸಲ್ಲಿಸುವ ವ್ಯಕ್ತಿಗಳು ಮನವಿಯ ಜೊತೆಗೆ ಹೆಸರು, ತಂದೆಯ ಹೆಸರು, ಆಧಾರ್ ಕಾರ್ಡ್ ನಂಬರ್, ಗ್ರಾಮದ ಹೆಸರು, ನಗರ, ತಾಲೂಕು ಹಾಗೂ ಜಿಲ್ಲೆಗಳ ಮಾಹಿತಿಯನ್ನು ಒದಗಿಸುವಂತೆ ಕಾಪು ತಾಲೂಕು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಧರ್ಮಸ್ಥಳದಲ್ಲಿ ಭಕ್ತಾಧಿಗಳಿಗೆ ಹೊಸ ರೂಲ್ಸ್‌ : ನೇತ್ರಾವತಿ ನದಿಯಲ್ಲಿ ‘ಸ್ನಾನದ ವೇಳೆ ಸೋಪು ಶ್ಯಾಂಪು ಬಳಕೆ ನಿಷೇಧ’ – Vishwanews24

Leave a Reply