Featured

ಕಾಪು : ನ.8 ರಂದು ದಂಡ ತೀರ್ಥ ಪದವಿ ಪೂರ್ವ ಕಾಲೇಜಿನ ರಜತಾ ಮಹೋತ್ಸವ ಸಮಾರಂಭ – vishwanews24

ದಂಡ ತೀರ್ಥ ಪದವಿ ಪೂರ್ವ ಕಾಲೇಜಿಗೆ ಬೆಳ್ಳಿ ಹಬ್ಬದ ಸಂಭ್ರಮ ಆಚರಣೆ ..

ಕೀರ್ತಿಶೇಷ ಡಾ|| ಕೆ.ಪ್ರಭಾಕರ ಶೆಟ್ಟಿ ಪುತ್ಥಳಿ ಅನಾವರಣ ..

ಒಂದು ಕೋಟಿ ರೂಪಾಯಿ ವಿದ್ಯಾರ್ಥಿವೇತನ ಸಂಗ್ರಹ : ಡಾ ಕೆ ಪ್ರಶಾಂತ್ ಶೆಟ್ಟಿ

ವಿಶ್ವನ್ಯೂಸ್ ಸುದ್ದಿ : ಕಾಪು ಭಾಗದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನು ಮಾಡಿರುವ ದಂಡ ತೀರ್ಥ ಸಮೂಹ ವಿದ್ಯಾ ಸಂಸ್ಥೆಗಳಡಿಯಲ್ಲಿ ಬರುವ ಪದವಿ ಪೂರ್ವ ಕಾಲೇಜಿನ ರಜತಾ ಮಹೋತ್ಸವ ಸಮಾರಂಭವು 8.11.2024ರ ಶುಕ್ರವಾರದಂದು ನಡೆಯಲಿದ್ದು ಆ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದಾರೆ.

ಈ ಬಗ್ಗೆ ಸಂಚಾಲಕ ಡಾ ಕೆ ಪ್ರಶಾಂತ್ ಶೆಟ್ಟಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿ 1999ರಲ್ಲಿ ಕೀರ್ತಿ ಶೇಷ ಡಾ. ಕೆ ಪ್ರಭಾಕರ್ ಶೆಟ್ಟಿ ಅವರ ಸಂಚಾಲಕತ್ವದಲ್ಲಿ ವಿಜ್ಞಾನ ವಿಭಾಗದ ಮೂಲಕ ಪದವಿ ಪೂರ್ವ ಕಾಲೇಜು ಪ್ರಾರಂಭವಾಗಿದ್ದು ಇಂದಿಗೆ ಅದು ಬೆಳ್ಳಿಹಬ್ಬವನ್ನ ಆಚರಿಸಿಕೊಳ್ಳುತ್ತಿದೆ ಆ ಪ್ರಯುಕ್ತ ಶುಕ್ರವಾರದಂದು ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ದಿವಂಗತ ಡಾ .ಪ್ರಭಾಕರ್ ಶೆಟ್ಟಿ ಅವರ ಪುತ್ಥಲಿ ಅನಾವರಣ ಹಾಗೂ ಸಭಾ ಕಾರ್ಯಕ್ರಮ ಮತ್ತು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಅಂಗವಾಗಿ ಒಂದು ಕೋಟಿ ರೂಪಾಯಿ ವಿದ್ಯಾರ್ಥಿವೇತನ ಸಂಗ್ರಹದ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಬೆಳ್ಳಿ ಹಬ್ಬದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಹಿಸಲಿದ್ದು ,ಎಮ್ ಆರ್ ಜಿ ಗ್ರೂಪ್ ನ ಅಧ್ಯಕ್ಷರಾಗಿರುವ ಡಾಕ್ಟರ್ ಕೆ ಪ್ರಕಾಶ್ ಶೆಟ್ಟಿ ಅವರು ದೀಪ ಪ್ರಜ್ವಲನೆ ಮಾಡಲಿದ್ದು, ಡಾ. ಎಮ್ ಶಾಂತಾರಾಮ್ ಶೆಟ್ಟಿ- ಪ್ರೊ ಚಾನ್ಸೇಲರ್ ನಿಟ್ಟೆ ಯುನಿವರ್ಸಿಟಿ, ಮಣಿಪಾಲ ವಿಶ್ವವಿದ್ಯಾಲಯದ ಪ್ರೊ ಚಾನ್ಸಲರ್ ಡಾಕ್ಟರ್ ಎಚ್ಎಸ್ ಬಲ್ಲಾಳ್ ಪುತ್ಥಳಿ ಅನಾವರಣ ಮಾಡಲಿದ್ದು, ಎಂಡಿ ಮಲ್ಟಿಟೆಕ್ ಗ್ರೂಪ್ ಮಸ್ಕತ್ ನ ಸಂಸ್ಥಾಪಕ ದಿವಾಕರ ಶೆಟ್ಟಿ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ , ಮಹಮ್ಮದ್ ಅಸ್ಲಾಂ ಖಾಝಿ, ಚಂದ್ರಶೇಖರ ಶೆಟ್ಟಿ ,ಅಶೋಕ್ ಹೆಗ್ಡೆ, ಮಾರುತಿ , ಕಾಪು ದಿವಾಕರ ಶೆಟ್ಟಿ, ಕೆ ವಾಸುದೇವ ಶೆಟ್ಟಿ ,ಶ್ರೀ ಮನೋಹರ ಎಸ್ ಶೆಟ್ಟಿ ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು.

ಪ್ರಸ್ತುತ ಕಾಲಘಟ್ಟದಲ್ಲಿ ಕಾಪು ಭಾಗದಲ್ಲಿ ಉನ್ನತ ಶಿಕ್ಷಣವನ್ನು ನೀಡುವಲ್ಲಿ ದಂಡ ತೀರ್ಥ ಸಮೂಹ ವಿದ್ಯಾ ಸಂಸ್ಥೆಗಳು ಮುಂಚೂಣಿಯಲ್ಲಿದ್ದು ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆಯೂ ಜಾಸ್ತಿ ಆಗುತ್ತಿದೆ ,ಫಲಿತಾಂಶ ಉತ್ತಮ ಗುಣಮಟ್ಟವನ್ನು ತಲುಪುತ್ತಿದೆ ವಾಣಿಜ್ಯ ಕಲಾ ಹಾಗೂ ವಿಜ್ಞಾನ ವಿಭಾಗದಲ್ಲಿ ವಿಶೇಷವಾದ ತರಬೇತಿ ಮತ್ತು ಸ್ಪೋರ್ಟ್ಸ್ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆಯುತ್ತಾ ಬರುತ್ತಿದ್ದು , ಪ್ರತಿವರ್ಷ ಬಡ ಹಾಗೂ ಪ್ರತಿಭಾನ್ವಿತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ದಾನಿಗಳ ಸಹಕಾರದೊಂದಿಗೆ ಸುಮಾರು ಏಳರಿಂದ ಹತ್ತು ಲಕ್ಷ ರೂಪಾಯಿಯ ವಿದ್ಯಾರ್ಥಿ ವಿತರಣೆ ನಡೆಯುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಾಂಶುಪಾಲ ಎಂ ನೀಲಾನಂದ ನಾಯಕ್, ಆಡಳಿತ ಅಧಿಕಾರಿ ಆಲ್ಬನ್ ರೊಡಿಗ್ರಾಸ್,ಶಿಕ್ಷಣ ಸಂಯೋಜಕ ಶಿವಣ್ಣ ಬಾಯರ್ ಮುಖ್ಯೋಪಾಧ್ಯಾಯ ಗಾಬ್ರಿಯಲ್ ಎಫ್ ಮೆಸ್ಕನೆಸ್ ಉಪಸ್ಥಿತರಿದ್ದರು.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

1 hour ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

1 hour ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

2 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

2 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

3 hours ago