ಕಾಪು: ದರೋಡೆಗೆ ಸಂಚು – ಕಾರಿನಲ್ಲಿ ಮಾರಕಾಯುಧಗಳು ಪತ್ತೆ ; ಆರು ಮಂದಿಯ ಬಂಧನ
ಕಾಪು : ದರೋಡೆಗೆ ಸಂಚು ರೂಪಿಸಿ ಕಾರಿನಲ್ಲಿ ಮಾರಕಾಯಧಗಳೊಂದಿಗೆ ಸಂಚರಿಸುತ್ತಿದ್ದ ಆರೋಪದಲ್ಲಿ ಆರು ಮಂದಿಯನ್ನು ಕಾಪು ಪೊಲೀಸರು ಶನಿವಾರ ಸಂಜೆ ಕಾಪು ಸಮೀಪದ ಕೋತಲಕಟ್ಟೆ ಎಂಬಲ್ಲಿ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮುಲ್ಕಿಯ ಅಮಿತ್ ರಾಜ್, ಕಾಟಿಪಳ್ಳದ ಪ್ರಕಾಶ್, ವಾಮಂಜೂರು ನೀರುಮಾರ್ಗದ ವರುಣ್, ಸುರತ್ಕಲ್‌ನ ಕಾರ್ತಿಕ್ ಶೆಟ್ಟಿ, ಕಾಟಿಪಳ್ಳದ ಅಭಿಷೇಕ್ ಮತ್ತು ಫರಂಗಿಪೇಟೆಯ ಶ್ರೀಕಾಂತ್ ಶ್ರೀಪತಿ ಬಂಧಿತ ಆರೋಪಿಗಳು.
ಬಂಧಿತರಿಂದ ಕಾರು, ಮಾರಕಾಯುಧಗಳು, ಖಾರದ ಪುಡಿ ಸಹಿತ ಇತರ ವಸ್ತುಗಳನ್ನು ವಶಪಡಿಸಿಕೊಳ್ಳ ಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉದ್ಯಾವರದ ಬಳಿ ಶನಿವಾರ ಸಂಜೆ ಅನುಮಾನಾಸ್ಪದ ವಾಗಿ ಸಂಚರಿಸುತ್ತಿದ್ದ ಕಾರೊಂದನ್ನು ಕಾಪು ಪೊಲೀಸ್ ವೃತ್ತ ನಿರೀಕ್ಷಕಿ ಜಯಾಶ್ರೀ ಮಾನೆ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಆರೋಪಿಗಳು ಕಾರನ್ನು ನಿಲ್ಲಿಸದೆ ಕಾಪು ಕಡೆ ಪರಾರಿಯಾಗಿದ್ದಾರೆ. ಬಳಿಕ ಈ ಬಗ್ಗೆ ಕಾಪು ಠಾಣೆಗೆ ಮಾಹಿತಿ ನೀಡಿದ ಜಯಾಶ್ರೀ ಮಾನೆ, ಆರೋಪಿಗಳ ವಾಹನವನ್ನು ಬೆನ್ನಟ್ಟಿಕೊಂಡು ಹೋಗಿದ್ದಾರೆ. ವಿಷಯ ತಿಳಿದ ಕಾಪು ಠಾಣೆಯ ಎಸ್ಸೈ ಅಬ್ದುಲ್ ಖಾದರ್ ಕೂಡಾ ಇನ್ನೊಂದು ವಾಹನದಲ್ಲಿ ಆರೋಪಿಗಳ ವಾಹನವನ್ನು ಬೆನ್ನಟ್ಟಿದ್ದಾರೆ. ಕಾಪುವಿನ ಕೋತಲ್ ಕಟ್ಟೆಯಲ್ಲಿ ಬಳಿ ಆರೋಪಿಗಳು ಸಂಚರಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ತಪಾಸಣೆ ಮಾಡಿದಾಗ ಮಾರಕಾಯುಧಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಕಾರಿನಲ್ಲಿದ್ದ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ದರೋಡೆ ಕೃತ್ಯಕ್ಕೆ ಸಂಚು ರೂಪಿಸಿ ಮಾರಕಾಯುಧಗಳೊಂದಿಗೆ ತೆರಳುತ್ತಿದ್ದರೆನ್ನಲಾಗಿದೆ. ಬಂಧಿತರ ಪೈಕಿ ಓರ್ವ ಎರಡು ವರ್ಷಗಳ ಹಿಂದೆ ಸುರತ್ಕಲ್‌ನಲ್ಲಿ ನಡೆದ ಮಂಗಳಪೇಟೆಯ ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಎಂದು ತಿಳಿದುಬಂದಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…