Featured

ಕಾಪು : ದಿನಸಿ ಸೇಲ್ಸ್‌ ಮೆನ್‌ ನ ಪರ್ಸ್‌ ಎಗರಿಸಿ ಲಕ್ಷಾಂತರ ರೂ. ದರೋಡೆ ಪ್ರಕರಣ ; ಆರೋಪಿ ಬಂಧನ – Vishwanews24

ಕಾಪು : ದಿನಸಿ ಸೇಲ್ಸ್‌ ಮೆನ್‌ ನ ಪರ್ಸ್‌ ಎಗರಿಸಿ ಲಕ್ಷಾಂತರ ರೂ. ದರೋಡೆ ಪ್ರಕರಣ ; ಆರೋಪಿ ಬಂಧನ

ಕಾಪು : ಠಾಣಾ ವ್ಯಾಪ್ತಿಯಲ್ಲಿ ಮಾರ್ಚ್ 2ರಂದು ನಡೆದಿದ್ದ ವ್ಯಕ್ತಿಯ ಸುಲಿಗೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಂತೋಷ್ ಕುಮಾರ್ (28) ಪ್ರಕರಣದ ಬಂಧಿತ ಆರೋಪಿ. ಬಂದಿತ ಆರೋಪಿಯಿಂದ 1,00,200 ರೂ. ನಗದು, ಒಂದು ಮೊಬೈಲ್ ಫೋನ್ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಾ.2 ರಂದು ಉಡುಪಿಯ ಸಂತೆಕಟ್ಟೆ ನಿವಾಸಿ ಉಮೇಶ್ ಪ್ರಭು ಅವರು ತಮ್ಮ ವಾಹನದಲ್ಲಿ ಸಾಮಗ್ರಿಗಳನ್ನ ತುಂಬಿಕೊಂಡು ಅಂಗಡಿಗಳಿಗೆ ಲೈನ್ ಸೇಲ್ ಮಾಡುವ ಸಲುವಾಗಿ ತೆಗೆದುಕೊಂಡು ಹೋಗಿದ್ದರು. ಬಳಿಕ ಸಾಮಾಗ್ರಿಗಳನ್ನು ಮಾರಾಟ ಮಾಡಿ ಬಂದ ಹಣ 1,25,000 ರೂ. ನಗದನ್ನು ಬ್ಯಾಗಿನಲ್ಲಿ ಹಾಕಿಕೊಂಡು ವಾಪಸ್ ಆಗುತ್ತಿದ್ದರು. ಈ ವೇಳೆ ಕಾಪು ಮಾರಿಗುಡಿ ಕಡೆಗೆ ನಡೆದುಕೊಂಡು ಹೋಗುತ್ತಿರುವಾಗ ದ್ವಿಚಕ್ರ ವಾಹನದಲ್ಲಿ ಅಲ್ಲಿಗೆ ಬಂದ ಆರೋಪಿ ಸಂತೋಷ್ ಕುಮಾರ್ ತನ್ನ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಉಮೇಶ್ ಪ್ರಭು ಅವರ ಬಳಿಯಿದ್ದ 1,25,000 ರೂ. ಹಣ ಇದ್ದ ಬ್ಯಾಗನ್ನು ಕದ್ದು ಪರಾರಿಯಾಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಕಾಪು ಪೊಲೀಸರು ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸಿ ಇಂದು ಆರೋಪಿಯನ್ನ ಬಂಧಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಕಾರ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಅರವಿಂದ ಕಲಗುಜ್ಜಿ ಇವರ ಮಾರ್ಗದರ್ಶನದಲ್ಲಿ, ಕಾಪು ವೃತ್ತ ನಿರೀಕ್ಷಕರಾದ ಜಯಶ್ರೀ ಎಸ್ ಮಾನೆ ಇವರ ನೇತೃತ್ವದಲ್ಲಿ ಕಾಪು ಠಾಣೆ ಪಿಎಸ್ಐ ಪುರುಷೋತ್ತಮ, ಅಪರಾಧ ಪತ್ತೆ ತಂಡದ ಪ್ರವೀಣ್ ಕುಮಾರ್, ಕಾಪು ಠಾಣೆಯ ನಾರಾಯಣ, ಪಡುಬಿದ್ರೆ ಠಾಣೆಯ ರಾಜೇಶ್ ಭಾಗವಹಿಸಿರುತ್ತಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago