ಕಾಪು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 80ನೇ ಬಡಗಬೆಟ್ಟು ಗ್ರಾ.ಪಂ.ನ ರಾಜೀವ ನಗರ ಸಂಯುಕ್ತ ಪ್ರೌಢಶಾಲೆಯ ಮತಗಟ್ಟೆಯಲ್ಲಿ ಅನ್ಯ ವ್ಯಕ್ತಿ ಮತದಾನ ಮಾಡಿದ್ದು, ಇಲ್ಲಿ ನಕಲಿ ಮತದಾನ ನಡೆದಿರುವ ಆರೋಪಗಳು ಕೇಳಿಬಂದಿತ್ತು.
ಅರ್ಬಿಯ ಕೃಷ್ಣ ನಾಯಕ್ ಮತದಾನ ಮಾಡಲು ಆಗಮಿಸಿದಾಗ ತಮ್ಮ ಹೆಸರಿನಲ್ಲಿ ಆಗಲೇ ಮತದಾನ ಆಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಆದರೆ ತಾನು ಮತದಾನ ಮಾಡಿಲ್ಲ ಎಂದು ಕೃಷ್ಣ ನಾಯಕ್ ತಿಳಿಸಿದರು.
ಪಕ್ಷದ ಏಜೆಂಟ್‌ಗಳು ಈ ವಿಚಾರದಲ್ಲಿ ಸಂಬಂಧಪಟ್ಟ ಮತಗಟ್ಟೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮುಖ ನೋಡದೆ ಒಬ್ಬರ ಹೆಸರಿನಲ್ಲಿ ಇನ್ನೊಬ್ಬರಿಗೆ ಮತದಾನ ಮಾಡಲು ಹೇಗೆ ಅವಕಾಶ ಮಾಡಿಕೊಟ್ಟಿದ್ದೀರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿ ಮರುಮತದಾನ ಮಾಡುವಂತೆ ಆಗ್ರಹಿಸಿದರು.
ತಪ್ಪು ಒಪ್ಪಿಕೊಂಡ ಅಧಿಕಾರಿಗಳು ಸರಿಪಡಿಸುವ ಭರವಸೆ ನೀಡಿದರು.
ರಾಜೀವ ನಗರದಲ್ಲಿ ನಕಲಿ ಮತದಾನ ಗೊಂದಲದ ವಿಚಾರಕ್ಕೆ ಸಂಬಂಧಿಸಿದಂತೆ ಡಿ.ಸಿ. ಡಾ.ವಿದ್ಯಾಕುಮಾರಿ ಸ್ಪಷ್ಟನೆ ನೀಡಿದ್ದು, ನಕಲಿ ಮತದಾನ ನಡೆದಿಲ್ಲ ಎಂದು ತಿಳಿಸಿದ್ದಾರೆ.
ರಾಜೀವ ನಗರದಲ್ಲಿ ಯಾವುದೇ ನಕಲಿ ಮತದಾನ ನಡೆದಿಲ್ಲ. ಮಣಿಪಾಲದ ಅರ್ಬಿ ನಿವಾಸಿ ಕೃಷ್ಣ ನಾಯ್ಕ್ ಹೆಸರಲ್ಲಿ ಮತದಾನ ನಡೆದಿದ್ದು, ಒಂದೇ ಹೆಸರಿನ ಇಬ್ಬರು ಇರೋದರಿಂದ ಗೊಂದಲ ಉಂಟಾಗಿದೆ. ಒಂದೇ ಮತಗಟ್ಟೆಯಲ್ಲಿ ಕೃಷ್ಣ ನಾಯ್ಕ ಹೆಸರಿನ ಇಬ್ಬರು ಮತದಾರರು ಇದ್ದ ಕಾರಣ ವೋಟರ್ ಸ್ಲಿಪ್ ಅದಲು ಬದಲಾಗಿ ಗೊಂದಲ ಉಂಟಾಗಿದೆ ಎಂದರು
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…