Featured

ಕಾಪು : ನಕಲಿ ಮತದಾನ ಆರೋಪ : ಜಿಲ್ಲಾಧಿಕಾರಿ ಸ್ಪಷ್ಟನೆ – Vishwanews24

ಕಾಪು : ನಕಲಿ ಮತದಾನ ಆರೋಪ – ಯಾವುದೇ ನಕಲಿ ಮತದಾನ ನಡೆದಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

ಕಾಪು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 80ನೇ ಬಡಗಬೆಟ್ಟು ಗ್ರಾ.ಪಂ.ನ ರಾಜೀವ ನಗರ ಸಂಯುಕ್ತ ಪ್ರೌಢಶಾಲೆಯ ಮತಗಟ್ಟೆಯಲ್ಲಿ ಅನ್ಯ ವ್ಯಕ್ತಿ ಮತದಾನ ಮಾಡಿದ್ದು, ಇಲ್ಲಿ ನಕಲಿ ಮತದಾನ ನಡೆದಿರುವ ಆರೋಪಗಳು ಕೇಳಿಬಂದಿತ್ತು.

ಅರ್ಬಿಯ ಕೃಷ್ಣ ನಾಯಕ್‌ ಮತದಾನ ಮಾಡಲು ಆಗಮಿಸಿದಾಗ ತಮ್ಮ ಹೆಸರಿನಲ್ಲಿ ಆಗಲೇ ಮತದಾನ ಆಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಆದರೆ ತಾನು ಮತದಾನ ಮಾಡಿಲ್ಲ ಎಂದು ಕೃಷ್ಣ ನಾಯಕ್‌ ತಿಳಿಸಿದರು.

ಪಕ್ಷದ ಏಜೆಂಟ್‌ಗಳು ಈ ವಿಚಾರದಲ್ಲಿ ಸಂಬಂಧಪಟ್ಟ ಮತಗಟ್ಟೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮುಖ ನೋಡದೆ ಒಬ್ಬರ ಹೆಸರಿನಲ್ಲಿ ಇನ್ನೊಬ್ಬರಿಗೆ ಮತದಾನ ಮಾಡಲು ಹೇಗೆ ಅವಕಾಶ ಮಾಡಿಕೊಟ್ಟಿದ್ದೀರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿ ಮರುಮತದಾನ ಮಾಡುವಂತೆ ಆಗ್ರಹಿಸಿದರು.
ತಪ್ಪು ಒಪ್ಪಿಕೊಂಡ ಅಧಿಕಾರಿಗಳು ಸರಿಪಡಿಸುವ ಭರವಸೆ ನೀಡಿದರು.

ರಾಜೀವ ನಗರದಲ್ಲಿ ನಕಲಿ ಮತದಾನ ಗೊಂದಲದ ವಿಚಾರಕ್ಕೆ ಸಂಬಂಧಿಸಿದಂತೆ ಡಿ.ಸಿ. ಡಾ.ವಿದ್ಯಾಕುಮಾರಿ ಸ್ಪಷ್ಟನೆ ನೀಡಿದ್ದು, ನಕಲಿ ಮತದಾನ ನಡೆದಿಲ್ಲ ಎಂದು ತಿಳಿಸಿದ್ದಾರೆ.

 

ರಾಜೀವ ನಗರದಲ್ಲಿ ಯಾವುದೇ ನಕಲಿ ಮತದಾನ ನಡೆದಿಲ್ಲ. ಮಣಿಪಾಲದ ಅರ್ಬಿ ನಿವಾಸಿ ಕೃಷ್ಣ ನಾಯ್ಕ್ ಹೆಸರಲ್ಲಿ ಮತದಾನ ನಡೆದಿದ್ದು, ಒಂದೇ ಹೆಸರಿನ ಇಬ್ಬರು ಇರೋದರಿಂದ ಗೊಂದಲ ಉಂಟಾಗಿದೆ. ಒಂದೇ ಮತಗಟ್ಟೆಯಲ್ಲಿ ಕೃಷ್ಣ ನಾಯ್ಕ ಹೆಸರಿನ ಇಬ್ಬರು ಮತದಾರರು ಇದ್ದ ಕಾರಣ ವೋಟರ್ ಸ್ಲಿಪ್ ಅದಲು ಬದಲಾಗಿ ಗೊಂದಲ ಉಂಟಾಗಿದೆ ಎಂದರು

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

16 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

16 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

16 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

17 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

17 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

19 hours ago