ಕಾಪು : ಕಂದಾಯಕ್ಕೆ ಸಂಬಂಧಿಸಿದ ಕಡತಗಳು ವಿಲೇವಾರಿ ಯಾಗದೆ ಬಾಕಿ ಉಳಿದಿರುವ ಬಗ್ಗೆ ಬಂದ ದೂರಿನಂತೆ ಉಡುಪಿ ಲೋಕಾಯುಕ್ತ ಪೊಲೀಸರು ಗುರುವಾರ ಕಾಪು ನಗರ ಯೋಜನಾ ಪ್ರಾಧಿಕಾರಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು.
ಕಾಪು ಪುರಸಭಾ ಕಟ್ಟಡದಲ್ಲಿರುವ ನಗರ ಯೋಜನಾ ಪ್ರಾಧಿಕಾರದಲ್ಲಿ ಕಡತಗಳು ವಿಲೇವಾರಿಯಾಗದೆ ಹಲವು ಸಮಯಗಳಿಂದ ಬಾಕಿ ಉಳಿದಿ ರುವ ಬಗ್ಗೆ ಹಲವು ದೂರುಗಳು ಬಂದಿದ್ದು, ಈ ಕುರಿತು ಕಾಪು ಜನಸಂಪರ್ಕ ಸಭೆಯಲ್ಲೂ ಆರೋಪಗಳು ಕೇಳಿ ಬಂದಿದ್ದವು.
ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಲೋಕಾಯುಕ್ತ ಡಿವೈಎಸ್ಪಿ ಹಾಲ ಮೂರ್ತಿ ರಾವ್ ನೇತೃತ್ವದ ತಂಡ ರಾಜ್ಯ ಲೋಕಾಯುಕ್ತದಿಂದ ಸರ್ಚ್ ವಾರೆಂಟ್ ಪಡೆದು ಪ್ರಾಧಿಕಾರಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಬೆಳಗ್ಗೆಯಿಂದ ಸಂಜೆಯವರೆಗೆ ಕಡತಗಳನ್ನು ಪರಿಶೀಲನೆ ನಡೆಸಿದ್ದು, ಇದರಲ್ಲಿ ಸಾಕಷ್ಟು ಸಮಯಗಳಿಂದ ವಿಲೇವಾರಿ ಆಗದೆ ಬಾಕಿ ಉಳಿದಿರುವ ಹಲವು ಕಡತಗಳು ಕಂಡುಬಂದಿವೆ.
ಇವುಗಳನ್ನು ಲೋಕಾಯುಕ್ತ ಪೊಲೀಸರು ದಾಖಲು ಮಾಡಿಕೊಂಡಿದ್ದು, ಈ ಕುರಿತ ವರದಿಯನ್ನು ರಾಜ್ಯ ಲೋಕಾ ಯುಕ್ತಕ್ಕೆ ಕಳುಹಿಸಿ ದೂರು ನೋಂದಾವಣಿ ಮಾಡಲಾಗುವುದು. ಮುಂದೆ ಈ ಬಗ್ಗೆ ತನಿಖೆ ನಡೆಸಿ, ಕಾನೂನು ಉಲ್ಲಂಘನೆ ಕಂಡುಬಂದರೆ ಕ್ರಮಕ್ಕೆ ಸರಕಾರಕ್ಕೆ ಶಿಫಾರಸ್ಸು ಮಾಡ ಲಾಗುವುದು ಎಂದು ಲೋಕಾಯುಕ್ತ ಡಿವೈಎಸ್ಪಿ ಹಾಲಮೂರ್ತಿ ರಾವ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಲೋಕಾಯುಕ್ತ ನಿರೀಕ್ಷಕರುಗಳಾದ ಮಂಜುನಾಥ್, ರಾಜೇಂದ್ರ ನಾಯ್ಕ್ ಎಂ.ಎನ್. ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…