ಕಾಪು : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿ ಸಾರ್ವಜನಿಕ ಸಂಚಾರಕ್ಕೆ ತೊಡಕು ಉಂಟು ಮಾಡಿದ ನಾಲ್ವರು ಕಾರು ಚಾಲಕರ ಮೇಲೆ ಕಾಪು ಪೋಲಿಸರು ಕೇಸ್ ದಾಖಲಿಸಿದ್ದಾರೆ.
ವಾಹನ ಚಾಲಕರಾದ ಗುಡ್ಡೆಯಂಗಡಿ ಉದ್ಯಾವರ ಗ್ರಾಮ ಅಯಾನ್ (24), ಕುಂಜಿಬೆಟ್ಟು ಮಿಶಾಲ್ವುದ್ದೀನ್ (23) ಉಡುಪಿಯ ಹೈಕ ಬಿಲ್ಡಿಂಗ್ ಶಾನೂನ್ ಡಿಸೋಜಾ (25), ಕೊಡಂತೂರು 10ನೇ ಕ್ರಾಸ್ ವಿವೇಕ್ (23) ಎಂಬ ನಾಲ್ವರ ವಿರುದ್ದ ಕೇಸು ದಾಖಲಿಸಿದ್ದರೆ.
ಮೇ.23ರಂದು ಕಾಫು ಠಾಣಾ ಪಿಎಸ್ಐ ಸುಮಾ ಇವರಿಗೆ ಓರ್ವರು ಕರೆಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ 66 ರಸ್ತೆಯಲ್ಲಿ 1 ಜೀಪು ಹಾಗೂ 3 ಕಾರುಗಳನ್ನು ಅದರ ಚಾಲಕರುಗಳು ಅತೀ ವೇಗ ಮತ್ತು ತೀವ್ರ ಅಜಾಗರೂಕತೆಯಿಂದ ಸಾರ್ವಜನಿಕರ ಪ್ರಾಣಕ್ಕೆ ಅಪಾಯಕರವಾಗುವ ರೀತಿಯಲ್ಲಿ ರಸ್ತೆಯ ತುಂಬಾ ಅಡ್ಡದಿಡ್ಡಿಯಾಗಿ ಚಲಾಯಿಸಿಕೊಂಡು ಹೋಗುತ್ತಿದ್ದ ವಿಡಿಯೋ ವೈರಲ್ ಆಗುತ್ತಿರುವ ಬಗ್ಗೆ ಮಾಹಿತಿ ನೀಡಿದ್ದರು.
ಈ ಬಗ್ಗೆ ಸಾಮಾಜಿಕ ಜಾಲತಾಣಗಳನ್ನು ಪರಿಶೀಲಿಸಿ ವಿಡಿಯೋದಲ್ಲಿನ ಸ್ಥಳವು ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡಬೆಟ್ಟು ಗ್ರಾಮದಿಂದ ಮೂಳೂರು ಗ್ರಾಮದವರೆಗಿನ ರಾ.ಹೆ 66 ಉಡುಪಿ- ಮಂಗಳೂರು ರಸ್ತೆಯಾಗಿರುತ್ತದೆ. ವಿಡಿಯೋದಲ್ಲಿ ವಾಹನಗಳ ನಂಬ್ರಗಳನ್ನು ಪರಿಶೀಲಿಸಲಾಗಿ KA 20 MD 6767 ನೇ ನೀಲಿ ಬಣ್ಣದ ಮಹೀಂದ್ರಾ ಜೀಪು, KA 20 MA 9370 ನೇ ಕಪ್ಪು ಬಣ್ಣದ CRETA ಕಾರು, KA 20 ME 6996 ನೇ ಬಿಳಿ ಬಣ್ಣದ ಫಾರ್ಚುನರ್ ಕಾರು, KA 20 MD 8078 ನೇ ಬಿಳಿ ಬಣ್ಣದ ಸ್ವಿಫ್ಟ್ ಕಾರುಗಳು ಎಂದು ತಿಳಿದುಬಂದಿರುತ್ತದೆ.
ಠಾಣಾ ವ್ಯಾಪ್ತಿಯಲ್ಲಿ ಅತೀ ವೇಗ ಹಾಗೂ ತೀವ್ರ ಅಜಾಗರೂಕತೆಯಿಂದ ಸಾರ್ವಜನಿಕರ ಪ್ರಾಣಕ್ಕೆ ಅಪಾಯಕರವಾಗುವ ರೀತಿಯಲ್ಲಿ ರಸ್ತೆಯ ತುಂಬಾ ಅಡ್ಡದಿಡ್ಡಿಯಾಗಿ ವಾಹನಗಳನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ಮೇಲ್ಕಂಡ ವಾಹನಗಳು ಹಾಗೂ ಅವುಗಳ ಚಾಲಕರುಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿ ಕೋರಿಕೆ ಕೊಂಡಿದ್ದರು.
ತಕ್ಷಣವೇ ಕಾರ್ಯಪ್ರವತ್ತರಾದ ಪೋಲಿಸರು ಉಡುಪಿ ಎಸ್ ಪಿ ಹಾಕೈ ಅಕ್ಷಯ್ ಮಚೀಂದ್ರ ಇವರ ಮಾರ್ಗದರ್ಶನದಲ್ಲಿ ಕಾರ್ಯಚರಣೆಗಿಳಿದು ನಾಲ್ಕು ಮಂದಿ ವಾಹನ ಚಾಲಕರು ಮತ್ತು ವಾಹನಗಳನ್ನು ವಶಪಡಿಸಿಕೊಂಡು ಕೇಸು ದಾಖಲಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…