Featured

ಕಾಪು : ನಾನು ಗುರ್ಮೆ ಅವರ ಜತೆಗಿದ್ದು ಬಿಜೆಪಿಯನ್ನು ಗೆಲ್ಲಿಸುವ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ : ಲಾಲಾಜಿ ಆರ್. ಮೆಂಡನ್ – Vishwanews24

ನಾನು ಗುರ್ಮೆ ಅವರ ಜತೆಗಿದ್ದು ಪಕ್ಷದ ಗೆಲುವುಗಾಗಿ ಶ್ರಮಿಸಲಿದ್ದೇವೆ : ಲಾಲಾಜಿ ಆರ್. ಮೆಂಡನ್

ಕಾಪು : ಯಾವುದೇ ಬಂಡಾಯವಿಲ್ಲ. ಪಕ್ಷವನ್ನು ಎರಡೂವರೆ ಸಾವಿರ ಮತಗಳಿಂದ 75 ಸಾವಿರ ಮತಗಳವರೆಗೆ ಬೆಳೆಸಿದ್ದೇವೆ‌. ಮುಂದೆಯೂ ಬಿಜೆಪಿ ಕ್ಷೇತ್ರವನ್ನಾಗಿ ಉಳಿಸಿಕೊಳ್ಳಲು ಹಗಲಿರುಳು ಶ್ರಮಿಸುತ್ತೇನೆ ಎಂದು ಬಿಜೆಪಿ ಟಿಕೆಟ್ ವಂಚಿತ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು‌.

ವಿಧಾನಸಭಾ ಚುನಾವಣೆ ಬಿಜೆಪಿ ಟಿಕೆಟ್ ಘೋಷಣೆಯಾಗುತ್ತಿದ್ದಂತೆಯೇ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಬುಧವಾರ ಬೆಳಿಗ್ಗೆ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿ, ಬಳಿಕ ಶಾಸಕ ಲಾಲಾಜಿ‌ ಆರ್. ಮೆಂಡನ್ ಅವರ ಮನೆಗೆ ತೆರಳಿ ಅವರೊಂದಿಗೆ ಚರ್ಚೆ ನಡೆಸಿದ್ದು ಅವರೊಂದಿಗಿನ ಮಾತುಕತೆ ಬಳಿಕ ಜಂಟಿ ಸುದ್ಧಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಕಳೆದ ಬಾರಿಯ ಚುನಾವಣೆಯಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಅವರು ನನಗೆ ಪೂರ್ಣ ಸಹಕಾರ ನೀಡಿದ್ದರು. ಈ ಬಾರಿ ನಾನು ಅವರ ಜತೆಗಿದ್ದು ಬಿಜೆಪಿಯನ್ನು ಗೆಲ್ಲಿಸುವ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ. ಇಂದಿನಿಂದಲೇ ಪಕ್ಷ ಸಂಘಟನೆ ನಡೆಸಿ, ಪಕ್ಷದ ಗೆಲುವುಗಾಗಿ ಶ್ರಮಿಸಲಿದ್ದೇವೆ ಎಂದರು.‌

ಕಾಪು ಕ್ಷೇತ್ರದಲ್ಲಿ ಆರು ಬಾರಿ ಸ್ಪರ್ಧಿಸಿದ್ದೇನೆ. ಮೂರು ಬಾರಿ ಗೆದ್ದು ಹದಿಮೂರುವರೆ ವರ್ಷಗಳ ಕಾಲ ಶಾಸಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಈಗ ಪಕ್ಷ ಸುರೇಶ್ ಶೆಟ್ಟಿ ಅವರಿಗೆ ಅವಕಾಶ ಮಾಡಿಕೊಟ್ಟಿದೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ಮೂರು ಸಾವಿರ ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅನುದಾನದೊಂದಿಗೆ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಿದ್ದೇವೆ.‌ ರಾಜ್ಯ ಮತ್ತು ಕೇಂದ್ರ ಸರಕಾರಗಳ ಅಭಿವೃದ್ಧಿಯನ್ನೇ ಮುಂದಿಟ್ಟುಕೊಂಡು ಮತಯಾಚನೆ ನಡೆಸಿ, ಪಕ್ಷವನ್ನು ಗೆಲ್ಲಿಸಲಿದ್ದೇವೆ ಎಂದರು.

ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಪಿ. ಶೆಟ್ಟಿ ಮಾತನಾಡಿ, ಪಕ್ಷ ಸೋಲುತ್ತಿದ್ದಾಗ ಲಾಲಾಜಿ ಮೆಂಡನ್ ಅವರು ಪಕ್ಷ ಸಂಘಟನೆ ಮಾಡಿರುವ ರೀತಿ ನಮಗೆ ಸ್ಫೂರ್ತಿ. ಶಾಸಕ ಲಾಲಾಜಿ ಮೆಂಡನ್ ಅವರ ಸಾಧನೆ, ತಪಸ್ಸು, ಸಹಕಾರವನ್ನೇ ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ. ಅವರ ನೇತೃತ್ವದಲ್ಲಿ ಮತ್ತೆ ಕಾಪುವಿನಲ್ಲಿ ಗೆಲ್ಲುತ್ತೆವೆ. ಅದಕ್ಕಾಗಿ ಎಲ್ಲರನ್ನು ಜೊತೆಗೂಡಿಸಿಕೊಂಡು ಮುನ್ನಡೆಯುತ್ತೇವೆ ಎಂದರು.

ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಪಕ್ಷದ ಮುಖಂಡರಾದ ಮಟ್ಟರು ರತ್ನಾಕರ ಹೆಗ್ಡೆ, ಕುತ್ಯಾರು ನವೀನ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೋಪಾಲ ಕೃಷ್ಣ ರಾವ್, ಸುಧಾಮ ಶೆಟ್ಟಿ ಶರಣ್ ಮಟ್ಟು, ಸತೀಶ್ ಸಾಲಿಯಾನ್, ಸುನಿತಾ ನಾಯಕ್ ಮೊದಲದವರು ಉಪಸ್ಥಿತರಿದ್ದರು

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

12 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

20 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

20 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

20 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

21 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

21 hours ago