ಕಾಪು: ತರಕಾರಿ ತರುವುದಾಗಿ ಹೇಳಿ ಪೇಟೆಗೆ ತೆರಳಿ, ಬಳಿಕ ನಾಪತ್ತೆಯಾಗಿದ್ದ ಮೂಲತಃ ಕುಂಜೂರು ನಿವಾಸಿ, ಪ್ರಸ್ತುತ ಕಾಪು ಉಳಿಯಾರಗೋಳಿಯಲ್ಲಿ ವಾಸವಿರುವ ರಾಮ ದೇವಾಡಿಗ (64) ಅವರು ಮುಂಬಯಿಯಲ್ಲಿ ಪತ್ತೆಯಾಗಿದ್ದಾರೆ.
ಎರಡು ತಿಂಗಳ ಹಿಂದೆ ದುಬಾೖನಿಂದ ಮರಳಿದ್ದ ಅವರು ಕಾಪು ಪೇಟೆಯಲ್ಲಿ ಚಹಾ ಮಾರುತ್ತಿದ್ದು, ಜ. 10ರಂದು ಮಧ್ಯಾಹ್ನ 1 ಗಂಟೆಯಿಂದ ನಾಪತ್ತೆಯಾಗಿದ್ದಾರೆ ಎಂದು ಅವರ ಪತ್ನಿ ಶಾಲಿನಿ ಕಾಪು ಪೊಲೀಸ್ ಠಾಣೆಗೆ ನೀಡಿದ್ದರು.
ನಾಲ್ಕೈದು ದಿನಗಳಿಂದ ನಾಪತ್ತೆಯಾಗಿದ್ದ ಅವರನ್ನು ಮುಂಬಯಿಯ ವರ್ಲಿ ಸೆಂಚುರಿ ಬಜಾರ್‌ನಲ್ಲಿರುವ ಮೋಡರ್ನ್ ಕೆಫೆಯಲ್ಲಿ ಮುಂಬಯಿಯಲ್ಲಿರುವ ಕುಂಜೂರು ಕಟ್ಟಪುಣಿ ನಿವಾಸಿ ಚಂದ್ರ ದೇವಾಡಿಗ ಅವರು ಗುರುತು ಹಿಡಿದಿದ್ದರು. ಬಳಿಕ ಊರಿನಲ್ಲಿರುವ ಸಹೋದರನಿಗೆ ಅವರು ಮಾಹಿತಿ ನೀಡಿದ್ದಾರೆ.
ಸಂಬಂಧಿಕರು ಅವರನ್ನು ಊರಿಗೆ ಕರೆದುಕೊಂಡು ಬಂದಿದ್ದು, ಪೊಲೀಸರ ಮುಂದೆ ಹಾಜರುಪಡಿಸಿ ನಾಪತ್ತೆ ಪ್ರಕರಣ ಸುಖಾಂತ್ಯಗೊಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…