ಕಾಪು : ನಾಳೆ ಹೊಸ ಮಾರಿಗುಡಿಯಲ್ಲಿ ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ :ಸ್ವರ್ಣ ಗೌರಿ ಪೂಜೆ – ಸ್ವರ್ಣ ಸಮರ್ಪಣಾ ಸಮಾರಂಭ – vishwanews24
ಕಾಪು : ನಾಳೆ ಹೊಸ ಮಾರಿಗುಡಿಯಲ್ಲಿ ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ :ಸ್ವರ್ಣ ಗೌರಿ ಪೂಜೆ-ಸ್ವರ್ಣ ಸಮರ್ಪಣಾ ಸಮಾರಂಭ
ಕಾಪು : ಪ್ರಥಮ ಹಂತದಲ್ಲಿ ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಪೂರ್ಣ ಶಿಲಾಮಯವಾಗಿ, ಅತ್ಯಾಕರ್ಷವಾದ ಇಳಕಲ್ ಕೆಂಪು ಶಿಲೆಯಿಂದ ನಿರ್ಮಾಣಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿ ದೇವಸ್ಥಾನದಲ್ಲಿ ಪ್ರತಿಷ್ಟಾಪನೆಗೊಳ್ಳಲಿರುವ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಗೆ ಸಮರ್ಪಿಸಲ್ಪಡುವ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಸ್ವರ್ಣ ಸಮರ್ಪಣೆಗೆ ಜೂ. 25 ರಿಂದ ಅವಕಾಶ ಸಿಗಲಿದೆ.
ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ವಿದ್ವಾನ್ ಕುಮಾರಗುರು ತಂತ್ರಿ ಮತ್ತು ಅರ್ಚಕ ವೇ.ಮೂ. ಕೆ. ಶ್ರೀನಿವಾಸ ತಂತ್ರಿ ಅವರ ನೇತೃತ್ವದಲ್ಲಿ, ಶಿಲಾ ಸೇವೆ, ಶಿಲಾ ಕಂಬ ಸಮರ್ಪಿಸಿದ ದಾನಿಗಳು, ಭಕ್ತರು ಮತ್ತು ಗಣ್ಯರ ಉಪಸ್ಥಿತಿಯಲ್ಲಿ ಜೂ. 25 ರಂದು ಬೆಳಿಗ್ಗೆ 9.09 ಕ್ಕೆ ಸ್ವರ್ಣ ಗೌರಿ ಪೂಜೆ ನೆರವೇರಿಸಿ, ಬಳಿಕ ಸ್ವರ್ಣ ಸಮರ್ಪಣಾ ಸಮಾರಂಭಕ್ಕೆ ಚಾಲನೆ ನೀಡಲಾಗುವುದು.
ಬೆಂಗಳೂರು: ಮಳೆ ಬೆನ್ನಲ್ಲೇ ಡೆಂಗ್ಯೂ ಪ್ರಕರಣ ಹೆಚ್ಚಳ – vishwanews24
20 ಕೆಜಿ ಸ್ವರ್ಣ, 160 ಕೆಜಿ ಬೆಳ್ಳಿ : ಕಾಪು ಮಾರಿಯಮ್ಮ ದೇವಿ ಮತ್ತು ಉಚ್ಚಂಗಿ ದೇವಿಯ ನೂತನ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ 20 ಕೆಜಿ ಚಿನ್ನ, 160 ಕೆಜಿ ಬೆಳ್ಳಿ ಉಪಯೋಗಿಸಲಾಗುತ್ತದೆ ಪ್ರಪಂಚದಾದ್ಯಂತ ನೆಲೆಸಿರುವ ಭಕ್ತರು ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣಾ ಕಾರ್ಯದಲ್ಲಿ ಪಾಲ್ಗೊಳ್ಳಬೇಕೆನ್ನುವುದು ಸಮಿತಿಯ ಆಶಯವಾಗಿದೆ.

ಬಳಸಿದ ಚಿನ್ನ ಸಮರ್ಪಣೆಗೂ ಅವಕಾಶ : ಗದ್ದುಗೆಯೇ ಪ್ರಧಾನವಾಗಿರುವ ಕಾಪು ಮಾರಿಗುಡಿಯಲ್ಲಿ ಸ್ವರ್ಣ ಗದ್ದುಗೆ ಸಮರ್ಪಣೆಗೆ ಹೊಸ ಚಿನ್ನದೊಂದಿಗೆ ಭಕ್ತರು ತಾವು ಉಪಯೋಗಿಸಿದ, ಬಳಸಿದ ಚಿನ್ನಗಳನ್ನೂ ಹರಕೆಯ ರೂಪದಲ್ಲಿ ಸಮರ್ಪಿಸಲು ಅವಕಾಶವಿದೆ. ಸಮಿತಿಯ ಸಂಕಲ್ಪಕ್ಕೆ ಮಾರಿಯಮ್ಮ ದೇವಿಯ ಅಭಯವೂ ಸಿಕ್ಕಿದ್ದು ಸ್ವರ್ಣ ನೀಡಿದ ಭಕ್ತರ ಕಷ್ಟ ಕಾರ್ಪಣ್ಯಗಳನ್ನು ತನ್ನ ಕಾಲಬುಡಕ್ಕೆ ಹಾಕಿಕೊಳ್ಳುವುದಾಗಿ ಅಮ್ಮನ ನುಡಿಯಾಗಿದೆ .









