Featured

ಕಾಪು : ನಾಳೆ ಹೊಸ ಮಾರಿಗುಡಿಯಲ್ಲಿ ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ :ಸ್ವರ್ಣ ಗೌರಿ ಪೂಜೆ – ಸ್ವರ್ಣ ಸಮರ್ಪಣಾ ಸಮಾರಂಭ  – vishwanews24

ಕಾಪು : ನಾಳೆ ಹೊಸ ಮಾರಿಗುಡಿಯಲ್ಲಿ ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ :ಸ್ವರ್ಣ ಗೌರಿ ಪೂಜೆ-ಸ್ವರ್ಣ ಸಮರ್ಪಣಾ ಸಮಾರಂಭ

ಕಾಪು : ಪ್ರಥಮ ಹಂತದಲ್ಲಿ ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಪೂರ್ಣ ಶಿಲಾಮಯವಾಗಿ, ಅತ್ಯಾಕರ್ಷವಾದ ಇಳಕಲ್ ಕೆಂಪು ಶಿಲೆಯಿಂದ ನಿರ್ಮಾಣಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿ ದೇವಸ್ಥಾನದಲ್ಲಿ ಪ್ರತಿಷ್ಟಾಪನೆಗೊಳ್ಳಲಿರುವ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಗೆ ಸಮರ್ಪಿಸಲ್ಪಡುವ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಸ್ವರ್ಣ ಸಮರ್ಪಣೆಗೆ ಜೂ. 25 ರಿಂದ ಅವಕಾಶ ಸಿಗಲಿದೆ.

ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ವಿದ್ವಾನ್ ಕುಮಾರಗುರು ತಂತ್ರಿ ಮತ್ತು ಅರ್ಚಕ ವೇ.ಮೂ. ಕೆ. ಶ್ರೀನಿವಾಸ ತಂತ್ರಿ ಅವರ ನೇತೃತ್ವದಲ್ಲಿ, ಶಿಲಾ ಸೇವೆ, ಶಿಲಾ ಕಂಬ ಸಮರ್ಪಿಸಿದ ದಾನಿಗಳು, ಭಕ್ತರು ಮತ್ತು ಗಣ್ಯರ ಉಪಸ್ಥಿತಿಯಲ್ಲಿ ಜೂ. 25 ರಂದು ಬೆಳಿಗ್ಗೆ 9.09 ಕ್ಕೆ ಸ್ವರ್ಣ ಗೌರಿ ಪೂಜೆ ನೆರವೇರಿಸಿ, ಬಳಿಕ ಸ್ವರ್ಣ ಸಮರ್ಪಣಾ ಸಮಾರಂಭಕ್ಕೆ ಚಾಲನೆ ನೀಡಲಾಗುವುದು.

20 ಕೆಜಿ‌ ಸ್ವರ್ಣ, 160 ಕೆಜಿ ಬೆಳ್ಳಿ : ಕಾಪು ಮಾರಿಯಮ್ಮ ದೇವಿ ಮತ್ತು ಉಚ್ಚಂಗಿ ದೇವಿಯ ನೂತನ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ 20 ಕೆಜಿ ಚಿನ್ನ, 160 ಕೆಜಿ ಬೆಳ್ಳಿ ಉಪಯೋಗಿಸಲಾಗುತ್ತದೆ ಪ್ರಪಂಚದಾದ್ಯಂತ ನೆಲೆಸಿರುವ ಭಕ್ತರು ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣಾ ಕಾರ್ಯದಲ್ಲಿ ಪಾಲ್ಗೊಳ್ಳಬೇಕೆನ್ನುವುದು ಸಮಿತಿಯ ಆಶಯವಾಗಿದೆ.

ಬಳಸಿದ ಚಿನ್ನ ಸಮರ್ಪಣೆಗೂ ಅವಕಾಶ : ಗದ್ದುಗೆಯೇ ಪ್ರಧಾನವಾಗಿರುವ ಕಾಪು‌ ಮಾರಿಗುಡಿಯಲ್ಲಿ ಸ್ವರ್ಣ ಗದ್ದುಗೆ ಸಮರ್ಪಣೆಗೆ ಹೊಸ ಚಿನ್ನದೊಂದಿಗೆ ಭಕ್ತರು ತಾವು ಉಪಯೋಗಿಸಿದ, ಬಳಸಿದ ಚಿನ್ನಗಳನ್ನೂ ಹರಕೆಯ ರೂಪದಲ್ಲಿ ಸಮರ್ಪಿಸಲು ಅವಕಾಶವಿದೆ. ಸಮಿತಿಯ ಸಂಕಲ್ಪಕ್ಕೆ ಮಾರಿಯಮ್ಮ ದೇವಿಯ ಅಭಯವೂ ಸಿಕ್ಕಿದ್ದು ಸ್ವರ್ಣ ನೀಡಿದ ಭಕ್ತರ ಕಷ್ಟ ಕಾರ್ಪಣ್ಯಗಳನ್ನು ತನ್ನ ಕಾಲಬುಡಕ್ಕೆ ಹಾಕಿಕೊಳ್ಳುವುದಾಗಿ ಅಮ್ಮನ ನುಡಿಯಾಗಿದೆ .

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago