Featured

ಕಾಪು  : ನಿಲ್ಲಿಸಿದ್ದ ದ್ವಿಚಕ್ರ ವಾಹನದ ಸೀಟಿನ ಕೆಳಗೆ ಇಟ್ಟಿದ್ದ ಚಿನ್ನದ ಸರ ಕಳವು – Vishwanews24

ಕಾಪು  : ನಿಲ್ಲಿಸಿದ್ದ ದ್ವಿಚಕ್ರ ವಾಹನದ ಸೀಟಿನ ಕೆಳಗೆ ಇಟ್ಟಿದ್ದ ಚಿನ್ನದ ಸರ ಕಳವು

ಕಾಪು  : ತಾಲೂಕಿನ ಮಲ್ಲಾರು ಗ್ರಾಮದ ಕೊಪ್ಪಲಂಗಡಿಯಲ್ಲಿ ಅಂಗಡಿಯೊಂದರ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನದ ಸೀಟಿನ ಕೆಳಗೆ ಇಟ್ಟಿದ್ದ ಚಿನ್ನದ ಸರವನ್ನು ಕಳ್ಳರು ಕಳವು ಮಾಡಿರುವ ಘಟನೆ ನಡೆದಿದೆ.

ಶಿವಳ್ಳಿ ಗ್ರಾಮದ ಸಗ್ರಿ ನಿವಾಸಿ ಪೂಜಾ ಅವರು, ಫೆ.17 ರಂದು ತಮ್ಮ ದೊಡ್ಡಮ್ಮನ ಮಗಳಾದ ಉಷಾರೊಂದಿಗೆ ಕಾಪುವಿನ ಮಲ್ಲಾರು ಗ್ರಾಮದ ಕೊಪ್ಪಲಂಗಡಿಗೆ ತಮ್ಮ ದ್ವಿಚಕ್ರ ವಾಃನದಲ್ಲಿ ಬಂದಿದ್ದರು. ಇಲ್ಲಿನ ಅಂಗಡಿಯೊಂದರ ಮುಂದೆ ತಮ್ಮ ದ್ವಿಚಕ್ರ ವಾಹನ ನಿಲ್ಲಿಸಿ ಮಗುವಿಗೆ ಪೆನ್ಸಿಲ್ ಸೆಟ್ ನ್ನು ತೆಗೆದುಕೊಳ್ಳುವ ಸಲುವಾಗಿ ಸ್ಟೇಷನರಿ ಅಂಗಡಿಗೆ ಹೋಗಿ ಮರಳಿ ಸ್ಕೂಟರ್ ಇಟ್ಟಲ್ಲಿಗೆ ಬಂದಿದ್ದರು.

ಈ ವೇಳೆ ದ್ವಿಚಕ್ರ ವಾಹನದ ಸೀಟಿನ ಲಾಕ್ ತೆರೆದು ಮೊಬೈಲನ್ನು ಒಳಗೆ ಇಡುವಾಗ ಅಲ್ಲಿ ಇಟ್ಟಿದ್ದ ಬೆಸುಗೆ ಹಾಕಿಸುವುದಕ್ಕಾಗಿ ತಂದಿದ್ದ ಚಿನ್ನದ ಸರ ಹಾಗೂ ಪೆಂಡೆಂಟ್ ಇದ್ದ ಸಣ್ಣ ಪರ್ಸ್ ಕಂಡು ಬಂದಿರುವುದಿಲ್ಲ. ಈ ಬಗ್ಗೆ ಅಕ್ಕ ಪಕ್ಕದವರಲ್ಲಿ ಹಾಗೂ ಹತ್ತಿರದ ಅಂಗಡಿಯಲ್ಲಿ ವಿಚಾರಿಸಿದರೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಅದರಂತೆ ಕಳ್ಳರು ಪೂಜಾ ಅವರ ದ್ವಿಚಕ್ರ ವಾಹನದ ಸೀಟಿನ ಲಾಕ್ ಓಪನ್ ಮಾಡಿ ಒಳಗೆ ಇಟ್ಟಿದ್ದ 48,000 ರೂ. ಮೌಲ್ಯದ 16 ಗ್ರಾಂ ತೂಕದ ಚಿನ್ನದ ಸರವನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎಂಬುದಾಗಿ ನೀಡಿದ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago