ಕಾಪು : ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್ ಕಳವು ಮಾಡಿರುವ ಘಟನೆ ಕೊಪ್ಪಲಂಗಡಿ ಸಮೀಪ ನಡೆದಿದೆ.
ಈ ಬಗ್ಗೆ ರಾಯಚೂರಿನ ಹನುಮೇಶ ಎಂಬವರು ದೂರು ನೀಡಿದ್ದು ಅದರಂತೆ ಜೂ 8 ರಂದು ರಾತ್ರಿ 8 ಗಂಟೆ ಸುಮಾರಿಗೆ ಲಾರಿ ಹಾಗೂ ತನ್ನ ಇತರ ಸ್ನೇಹಿತರಾದ ಮಾರುತಿ, ಮರಿಯಪ್ಪ, ಆದೇಶ ಎಂಬವರ 3 ಟಿಪ್ಪರ್ ಲಾರಿಯನ್ನು ಕೊಪ್ಪಲಂಗಡಿ ಮಸೀದಿ ಸಮೀಪ ಇಟ್ಟು ರಾತ್ರಿ ಮನೆಯಲ್ಲಿ ಮಲಗಿದ್ದರು.
ಮರುದಿನ ಜೂ.9 ರಂದು ಬೆಳಿಗ್ಗೆ 6 ಗಂಟೆಗೆ ನಾಲ್ವರು ಲಾರಿಯ ಡೀಸೆಲ್ ಟ್ಯಾಂಕ್ ಪರಿಶೀಲಿಸಿದಾಗ ನಾಲ್ಕು ಲಾರಿಯಲ್ಲಿ ಡೀಸೆಲ್ ಇಲ್ಲದಿರುವುದು ಕಂಡು ಬಂದಿದೆ. ಹಾಗೂ ಈ ನಾಲ್ಕು ಲಾರಿಯಲ್ಲಿದ್ದ ಅಂದಾಜು ಸುಮಾರು 9000 ರೂ ಮೌಲ್ಯದ 100 ಲೀಟರ್ ಡೀಸೆಲ್ ಕಳವಾಗಿದೆ. ಅದರಂತೆ ಜೂ.8 ರ ರಾತ್ರಿ ಯಾರೋ ಕಳ್ಳರೂ ನಿಲ್ಲಿಸಿದ ನಾಲ್ಕು ಲಾರಿಗಳ ಡೀಸೆಲ್ ಟ್ಯಾಂಕ್ ನಿಂದ ಸುಮಾರು 100 ಲೀಟರ್ ಡೀಸೆಲ್ ಕಳವು ಮಾಡಿಕೊಂಡು ಹೋಗಿರುವುದಾಗಿ ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…