ಕಾಪು: ನಿವೃತ್ತ ಯೋಧ ಮೂಳೂರು ನಿವಾಸಿ ಹಾಜಿ ಅಬ್ದುರಝಾಕ್ ಶಾಬಾನ್ (85) ಅಲ್ಪ ಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ ನಿಧನ ಹೊಂದಿದರು.
18ನೇ ವಯಸ್ಸಿನಲ್ಲಿ ವಾಯುಸೇನೆಗೆ ಸೇರ್ಪಡೆಗೊಂಡ ಅಬ್ದುರಝಾಕ್ ಶಾಬಾನ್ ಅವರು ಎರಡು ವರ್ಷ ಬೆಂಗಳೂರಿನ ಏರ್‌ಫೋರ್ಸ್ ಟೆಕ್ನಿಕಲ್ ಕಾಲೇಜಿನಲ್ಲಿ ಕಮ್ಯುನಿಕೇಶನ್ ಎಂಜಿನಿಯರಿಂಗ್ ಡಿಪ್ಲೋಮಾ ಪಡೆದು ಬಳಿಕ ಕಮ್ಯುನಿಕೇಶನ್ ಆಫಿಸರ್ ಆಗಿ ಕಾರ್ಯನಿರ್ವಹಿಸಿದ್ದರು
ವಾಯುಸೇನಾ ಕಾಲಾವಧಿಯಲ್ಲಿ ದೆಹಲಿ, ಆಗ್ರಾ ಹಾಗೂ ಹಿಮಾಲಯದ ತಪ್ಪಲಿನ ಲಡಾಖ್ ಸೇನಾ ನೆಲೆಯಲ್ಲೂ ಕಾರ್ಯಾಚರಣೆ ನಡೆಸಿದ್ದರು. 1962ರ ಚೀನಾ ಯುದ್ಧ 1965ರ ಪಾಕಿಸ್ತಾನ ಯುದ್ಧ ಹಾಗೂ 1971ರ ಪಾಕಿಸ್ತಾನದ ವಿರುದ್ಧ ಸಮರ ಸೇನೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಅನೇಕ ಮೆಡಲ್‌ಗಳಿಂದ ಪುರಸ್ಕೃತರಾದರು.
ಸುರತ್ಕಲ್ : ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಬಲೆ ತುಂಬಾ ರಾಶಿ ರಾಶಿ ಮೀನು.. ಮೀನುಗಾರರು ಫುಲ್ ಖುಷ್ – Vishwanews24
1975ರಲ್ಲಿ ಸ್ವಯಂ ನಿವೃತ್ತಿ ಘೋಷಿಸಿದ ನಂತರ ಧಾರ್ಮಿಕ ಸೇವಾರಂಗದಲ್ಲಿ ತೊಡಗಿಸಿಕೊಂಡಿದ್ದರು. ಮೂಳೂರಿನ ಮಸೀದಿಯ ಆಡಳಿತ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದು, ಮೂರು ಭಾರಿ ಮದ್ರಸದ ಹಾಗೂ ಒಂದು ಭಾರಿ ಮಸೀದಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಕೊಡುಗೈ ದಾನಿಯೂ ಆಗಿದ್ದ ಇವರು ತಂದೆಯ ಹೆಸರಿನಲ್ಲಿ ಮುಹಮ್ಮದ್ ಶಾಬಾನ್ ಟ್ರಸ್ಟ್ ಸ್ಥಾಪಿಸಿ ಅಸಕ್ತ ಕುಟುಂಬಗಳಿಗೆ ಧನಸಹಾಯ ನೀಡುತ್ತಿದ್ದರು.ಹಾಜಿ ಅಬು ರಝಾಕ್ ಶಾಬಾನ್ ಅವರು ಪತ್ನಿ ಗಂಡು ಮಕ್ಕಳು, ಬಂಧುಬಳಗವನ್ನು ಅಗಲಿದ್ದಾರೆ.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…