ಕಾಪು: ಅನಾರೋಗ್ಯದಿಂದ ಮನನೊಂದು ಮೀನುಗಾರ ನೇಣಿಗೆ ಶರಣಾದ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ. ಆತ್ಮಹತ್ಯೆಗೆ ಶರಣಾದವರು ಉಳಿಯಾರಗೋಳಿ ಗ್ರಾಮದ ನಿವಾಸಿ ರಮೇಶ್ (49) ಎಂದು ತಿಳಿದುಬಂದಿದೆ.
ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ರಮೇಶ ಅವರಿಗೆ 2 ತಿಂಗಳ ಹಿಂದೆ ಎದೆನೋವು ಕಾಣಿಸಿಕೊಂಡಿತ್ತು. ಕಾಪುವಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಬುಧವಾರ ರಾತ್ರಿ ಮನೆಯಲ್ಲಿ ಊಟ ಮಾಡಿ ಹಾಲ್‌ನಲ್ಲಿ ಮಗ ಮತ್ತು ಪತ್ನಿಯೊಂದಿಗೆ ಮಲಗಿದ್ದವರು ಮಧ್ಯರಾತ್ರಿ ಕಾಣೆಯಾಗಿದ್ದರು. ಪತ್ನಿ ಹುಡುಕಾಡಿದಾಗ ಮನೆಯ ಪಕ್ಕಾಸಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
ಕೂಡಲೇ ಅವರನ್ನು ಪತ್ನಿ ಮತ್ತು ಮಗ ಕೆಳಗಿಳಿಸಿ ಟಿಎಂಎ ಪೈ ಆಸ್ಪತ್ರೆ ಉಡುಪಿಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರೀಕ್ಷಿಸದ ವೈದ್ಯರು ರಮೇಶ್ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ಪುತ್ರ ರೋಷನ್ ನೀಡಿದ ದೂರಿನಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…