Featured

ಕಾಪು : ಪಕ್ಷದ ಕಾರ್ಯಕರ್ತರ ಅವಿರತ ಶ್ರಮದ ಫಲವಾಗಿ ಇಂದು ಬಿಜೆಪಿಯ ಬೇರುಗಳು ಸದೃಢವಾಗಿವೆ : ಕುಯಿಲಾಡಿ ಸುರೇಶ್ ನಾಯಕ್ -Vishwanews24

ಕಾಪು : ಪಕ್ಷದ ಕಾರ್ಯಕರ್ತರ ಅವಿರತ ಶ್ರಮದ ಫಲವಾಗಿ ಇಂದು ಬಿಜೆಪಿಯ ಬೇರುಗಳು ಸದೃಢವಾಗಿವೆ : ಕುಯಿಲಾಡಿ ಸುರೇಶ್ ನಾಯಕ್ -Vishwanews24

ಕಾಪು : ಬಿಜೆಪಿ ಕಾರ್ಯಕರ್ತ ಆಧಾರಿತ ಅತೀ ದೊಡ್ಡ ರಾಜಕೀಯ ಪಕ್ಷ. ಕಾರ್ಯಕರ್ತರೇ ಪಕ್ಷದ ಜೀವಾಳ ಅವರ ಅವಿರತ ಶ್ರಮದ ಫಲವಾಗಿ ಉಡುಪಿ ಜಿಲ್ಲೆಯಲ್ಲಿ ಬಿಜೆಪಿಯ ಬೇರುಗಳು ಸದೃಢವಾಗಿವೆ. ಪಕ್ಷವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ನಿತ್ಯ ನಿರಂತರ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು.

ಅವರು ಜು.26 ರಂದು ಹಿರಿಯಡ್ಕದ ಓಂತಿಬೆಟ್ಟು ಆರ್.ಎಸ್.ಬಿ ಸಭಾಂಗಣದಲ್ಲಿ ನಡೆದ ಬಿಜೆಪಿ ಕಾಪು ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರಗಳು ವಿವಿಧ ಜನಪರ ಯೋಜನೆಗಳ ಮೂಲಕ ಅತ್ಯುತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತಿವೆ. ಕೊರೋನಾ ಮಹಾಮಾರಿಯ ವ್ಯವಸ್ಥಿತ ನಿರ್ವಹಣೆಯ ಜೊತೆಗೆ ಕೃಷಿಕರು, ಕಾರ್ಮಿಕರು, ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸಿರುವ ಸರಕಾರ ಎಲ್ಲಾ ಕಠಿಣ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿದೆ. ಆದರೆ ವಿರೋಧ ಪಕ್ಷಗಳು ಮಾತ್ರ ಸರಕಾರದ ಯಾವುದೇ ಜನಪರ ಕಾರ್ಯಕ್ರಮಗಳಿಗೆ ಸಹಕಾರ ನೀಡದೇ ಕೇವಲ ಅಪಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಬಿಜೆಪಿ ಸರಕಾರದ ವಿವಿಧ ಜನಪರ ಯೋಜನೆ ಹಾಗೂ ಸಾಧನೆಗಳನ್ನು ಮನೆ ಮನೆಗಳಿಗೆ ತಲುಪಿಸುವ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಕುಯಿಲಾಡಿ ಹೇಳಿದರು.

ಬಿಜೆಪಿ ಕಾಪು ಮಂಡಲಾಧ್ಯಕ್ಷ ಶ್ರೀಕಾಂತ್ ನಾಯಕ್ ವಿಶೇಷ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಸಭೆಯಲ್ಲಿ ನಿರ್ಣಯಗಳ ಮಂಡನೆ, ಕಳೆದ ಮೂರು ತಿಂಗಳಲ್ಲಿ ನಡೆದ ಪಕ್ಷದ ಚಟುವಟಿಕೆಗಳು ಹಾಗೂ ಮುಂದಿನ ಮೂರು ತಿಂಗಳಲ್ಲಿ ಅನುಷ್ಠಾನಗೊಳಿಸಬೇಕಾದ ವಿವಿಧ ಕಾರ್ಯಕ್ರಮಗಳ ಬಗ್ಗೆ ಚಿಂತನ ಮಂಥನ ನಡೆಯಿತು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ಗೀತಾಂಜಲಿ ಸುವರ್ಣ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಕಾಪು ಮಂಡಲ ಪ್ರಭಾರಿ ರವೀಂದ್ರ ಮಡಿವಾಳ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ಪಂಚಾಯತ್ ನಿಕಟಪೂರ್ವ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಕಾಪು ಮಂಡಲ ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ, ಗೋಪಾಲಕೃಷ್ಣ ರಾವ್ ಮತ್ತು ಸಭೆಯ ಅಪೇಕ್ಷಿತರು ಉಪಸ್ಥಿತರಿದ್ದರು.

ಮಂಡಲ ವಿಶೇಷ ಕಾರ್ಯಕಾರಿಣಿ ಸಭೆಯ ಸಮಾರೋಪದಲ್ಲಿ ಬಿಜೆಪಿ ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಮಂಗಳೂರು ಸಮಾರೋಪ ಭಾಷಣಗೈದರು.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

11 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

13 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

13 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

14 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

14 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

14 hours ago