Featured

ಕಾಪು, ಪಡುಬಿದ್ರೆಯಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ,

ಕಾಪು ಪಡುಬಿದ್ರೆ, : ತೈಲ ಬೆಲೆ ಏರಿಕೆಯಾಗಿರುವುದನ್ನು ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳು ನೀಡಿರುವ ಬಂದ್ ಕರೆಗೆ ಕಾಪು ಹಾಗೂ ಪಡುಬಿದ್ರೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕಾಪು, ಉಚ್ಚಿಲ, ಎರ್ಮಾಳು, ಪಡುಬಿದ್ರೆ, ಪಲಿಮಾರು, ಮುದರಂಗಡಿಯಲ್ಲಿ ಬೆಳಗ್ಗೆ 10 ಗಂಟೆಯವರೆಗೆ ಅಂಗಡಿಮುಗ್ಗಟ್ಟುಗಳು ಎಂದಿನಂತೆ ತೆರೆದಿತ್ತು. ಕಾಪು ಹಾಗೂ ಪಡುಬಿದ್ರೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಂಗಡಿ ಮಾಲಕರಿಗೆ, ರಿಕ್ಷಾ, ಕಾರು ಚಾಲಕರಿಗೆ ಬಂದ್ ನಡೆಸುವಂತೆ ಮನವಿ ಮಾಡಿದರು. ಇವರ ಮನವಿಗೆ ಸ್ಪಂದಿಸಿ ಕೆಲವಡೆಗಳಲ್ಲಿ ಅಂಗಡಿಮುಂಗಟ್ಟುಗಳು ಬಳಿಕ ಮುಚ್ಚಲ್ಪಟ್ಟವು. ಕೆಲ ಸಮಯದ ಬಳಿಕ ಮತ್ತೆ ಕೆಲವು ಅಂಗಡಿ ಮಾಲಕರು ಅಂಗಡಿಗಳನ್ನು ತೆರೆದು ವ್ಯಾಪಾರ ಆರಂಭಿಸಿದರು.

ಕಾಪು ಪೊಲಿಪುವಿನ ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಮಾಜಿ ಶಾಸಕ ವಿನಯಕುಮಾರ್ ನೇತೃತ್ವದಲ್ಲಿ ಅರ್ಧ ಗಂಟೆಗಳ ಕಾಲ ರಸ್ತೆ ತಡೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಹಾಗೂ ತೈಲ ಬೆಲೆ ಏರಿಕೆಯ ವಿರುದ್ಧ ಘೋಷಣೆಗಳನ್ನು ಕೂಗಿದರು.

 

 

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago