Featured

ಕಾಪು : ಪಣಿಯೂರು ರೈಲು ನಿಲ್ದಾಣದಲ್ಲಿ ಮಂಗಳೂರು – ಗೋವಾ ಎಕ್ಸ್‌ಪ್ರೆಸ್‌ ರೈಲು ನಿಲುಗಡೆ ಆರಂಭ – vishwanews24

ಕಾಪು : ಪಣಿಯೂರು ರೈಲು ನಿಲ್ದಾಣದಲ್ಲಿ ಮಂಗಳೂರು – ಗೋವಾ ಎಕ್ಸ್‌ಪ್ರೆಸ್‌ ರೈಲು ನಿಲುಗಡೆ ಆರಂಭ

ಕಾಪು : ಪಣಿಯೂರು (ಪಡುಬಿದ್ರಿ) ರೈಲು ನಿಲ್ದಾಣದಲ್ಲಿ ನಿಲುಗಡೆಗೆ ಮಂಗಳೂರು – ಮಡಂಗಾವ್ (ಗೋವಾ) ಎಕ್ಸ್‌ಪ್ರೆಸ್ ರೈಲು ನಿಲುಗಡೆ ಸೋಮವಾರ(ಜು.28) ಆರಂಭಗೊಂಡಿದೆ.

ಬೆಳಪು ಗ್ರಾ‌ಮ ಪಂಚಾಯತ್ ಅಧ್ಯಕ್ಷ, ರೈಲು‌ ನಿಲುಗಡೆ ಹೋರಾಟ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ನೇತೃತ್ವದಲ್ಲಿ ಪಣಿಯೂರು ರೈಲು‌ ನಿಲ್ದಾಣದಲ್ಲಿ ನಿಲುಗಡೆಗೊಂಡ ಮೆಮು ರೈಲನ್ನು‌ ಸ್ವಾಗತಿಸಲಾಯಿತು.

ಗೋವಾದಿಂದ ರೈಲು ಚಲಾಯಿಸಿಕೊಂಡು ಬಂದ ಚಾಲಕರನ್ನು ಶಾಲು ಹೊದಿಸಿ ಗೌರವಿಸಲಾಯಿತು.

ಈ ಸಂದರ್ಭ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಪಣಿಯೂರು ರೈಲು‌‌‌ ನಿಲ್ದಾಣದ ಅಭಿವೃದ್ಧಿ, ಗೋವಾ ಎಕ್ಸ್‌ಪ್ರೆಸ್‌, ಮುಂಬಯಿ, ಬೆಂಗಳೂರು ರೈಲು ನಿಲಗಡೆಗೆ ಅವಕಾಶ ನೀಡುವಂತೆ ಹಲವು ವರ್ಷಗಳಿಂದ ಬೇಡಿಕೆ ನೀಡುತ್ತಾ ಬಂದಿದ್ದೇವೆ. ನಮ್ಮ ಹೋರಾಟಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಬೆಂಬಲ ನೀಡಿದ್ದು ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರ ಮೂಲಕವಾಗಿ ನಮ್ಮ ಬೇಡಿಕೆಯನ್ನು ಈಡೇರಿಸಿದ್ದಾರೆ ಎಂದರು.

ರೈಲು ನಿಲ್ದಾಣ ಅಭಿವೃದ್ದಿಗೆ ಪೂರಕವಾಗಿ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಅದಾನಿ ಸಿಎಸ್ಆರ್ ಅನುದಾನದಲ್ಲಿ 15 ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಲಾಗಿದ್ದು ಮುಂದುವರಿದ ಕಾಮಗಾರಿಗೆ ಮತ್ತೆ 20 ಲಕ್ಷ ರೂ. ಸಿಎಸ್ಆರ್ ಅನುದಾನ ಬಳಸಲಾಗುವುದು. ಸೋಲಾರ್ ದೀಪಗಳ‌ ಅಳವಡಿಕೆಗೂ ಒತ್ತು ನೀಡಲಾಗುವುದು ಎಂದರು.

ಹೋರಾಟ ಸಮಿತಿಯ ರಾಕೇಶ್, ಗ್ರಾಮಸ್ಥರು, ರೈಲ್ವೇ ಸ್ಟೇಷನ್ ಮಾಸ್ಟರ್ ಶಂಕರನ್, ಸಿಬಂದಿಗಳಾದ ಸುಜಿತ್, ಆದೇಶ್ ಹೆಗ್ಡೆ, ಲಲಿತಾ, ಶಾಂತ, ರಿಕ್ಷಾ ಚಾಲಕರು ಉಪಸ್ಥಿತರಿದ್ದರು. ‌

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago