Featured

ಕಾಪು : ಪರಿಸರ ಮಾಲಿನ್ಯದ ಆರೋಪ ; ತವಕ್ಕಲ್ ಫಿಶ್ ಫ್ಯಾಕ್ಟರಿಗೆ ಬೀಗ – vishwanews24

ಸಾರ್ವನಿಕರ ದೂರಿನ ಹಿನ್ನೆಲೆ  ಕಾರ್ಖಾನೆ ಮುಟ್ಟುಗೋಲು ಹಾಕಿದ ಕಾಪು ತಹಶೀಲ್ದಾರ್

ಕಾಪು : ಪರಿಸರ ಮಾಲಿನ್ಯ ಉಂಟು ಮಾಡುತ್ತಿದ್ದ ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಪಡು ಗ್ರಾಮದ ತವಕ್ಕಲ್ ಫಿಶ್ ಫ್ಯಾಕ್ಟರಿಗೆ ಬೀಗ ಜಡಿಯಲಾಗಿದೆ. ಹಲವು ವರ್ಷಗಳಿಂದ ಪರಿಸರ ಮಾಲಿನ್ಯದ ಆರೋಪ ಈ ಕಾರ್ಖಾನೆ ವಿರುದ್ಧ ಕೇಳಿ ಬರುತ್ತಿತ್ತು. ಸಾರ್ವನಿಕರ ವ್ಯಾಪಕ ದೂರಿನ ಹಿನ್ನೆಲೆಯಲ್ಲಿ ಕಾರ್ಖಾನೆಯನ್ನು ತಹಶೀಲ್ದಾರ್ ಪ್ರತಿಭಾ ಅವರು ಮುಟ್ಟುಗೋಲು ಹಾಕಿದ್ದಾರೆ.

ಪರಿಸರ ಮಾಲಿನ್ಯ ತಡೆಗಟ್ಟಲು ಕೈಗೊಳ್ಳಬೇಕಾದ ಯಾವುದೇ ಕ್ರಮಗಳನ್ನು ಈ ಕಾರ್ಖಾನೆ ಕೈಗೊಂಡಿಲ್ಲ. ಅತಿಯಾದ ದುರ್ನಾತ ಬೀರಿ ಗ್ರಾಮಸ್ಥರಿಗೆ ನಿತ್ಯ ನರಕಯಾತನೆ ಆಗಿತ್ತು. ಈ ಹಿನ್ನೆಲೆಯಲ್ಲಿ ಪರಿಸರ ಇಲಾಖೆಯಿಂದ ಮುಟ್ಟುಗೋಲು ಹಾಕಿಕೊಳ್ಳಲು ಶಿಫಾರಸು ಮಾಡಲಾಗಿತ್ತು. ಕಾರ್ಖಾನೆಯನ್ನು ಪರಿಶೀಲಿಸಿ ಅವ್ಯವಸ್ಥೆಯನ್ನು ಮನಗಂಡ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತವಕ್ಕಲ್ ಫಿಶ್ ಫ್ಯಾಕ್ಟರಿಯನ್ನು ಮುಟ್ಟುಗೋಲು ಹಾಕಲು ಆದೇಶ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಪರಿಸರ ವಿರೋಧಿಯಾಗಿ ಕಾರ್ಯಾಚರಿಸುತ್ತಿರುವ ಕಾರ್ಖಾನೆಗಳಿಗೆ ಎಚ್ಚರಿಕೆ ನೀಡಿದ ತಹಶೀಲ್ದಾರ್ ಪ್ರತಿಭಾ ಇದೀಗ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ಈ ಮೂಲಕ ಇದೀಗ ಪುರಸಭಾ ವ್ಯಾಪ್ತಿಯ ಪಡು ಗ್ರಾಮದ ಜನತೆ ನಿರಾಳರಾಗಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

17 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

18 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

18 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

18 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

18 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago