Featured

ಕಾಪು : ಪಾಂಗಾಳ ಶರತ್‌ ಶೆಟ್ಟಿ ಕೊಲೆ ಪ್ರಕರಣ : ಮೂವರು ಲಾಂಗ್ ಹಿಡಿದು ಬೈಕ್‌ನಲ್ಲಿ ತೆರಳುತ್ತಿರುವ ಸಿಸಿಟಿವಿ ದೃಶ್ಯ ಲಭ್ಯ  – Vishwanews24

ಕಾಪು : ಪಾಂಗಾಳ ಶರತ್‌ ಶೆಟ್ಟಿ ಕೊಲೆ ಪ್ರಕರಣ : ಮೂವರು ಲಾಂಗ್ ಹಿಡಿದು ಬೈಕ್‌ನಲ್ಲಿ ತೆರಳುತ್ತಿರುವ ಸಿಸಿಟಿವಿ ದೃಶ್ಯ ಲಭ್ಯ

ಕಾಪು: ಭಾನುವಾರ ಸಂಜೆ ಪಾಂಗಾಳದ ಶರತ್‌ ಶೆಟ್ಟಿ ಕೊಲೆ ಪ್ರಕರಣದ ಸಿಸಿಟಿ ಫೂಟೇಜ್ ಲಭ್ಯವಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಮೂವರು ವ್ಯಕ್ತಿಗಳು ಕೈಯಲ್ಲಿ ಲಾಂಗ್ ಹಿಡಿದು ಬೈಕ್‌ನಲ್ಲಿ ತೆರಳುತ್ತಿರುವ ದೃಶ್ಯ ಸೆರೆಯಾಗಿದ್ದು ಇದನ್ನಾಧರಿಸಿ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ರಿಯಲ್ ಎಸ್ಟೇಟ್ ಉದ್ಯಮಿ ಆಗಿದ್ದ ಶರತ್ ಶೆಟ್ಟಿಯವರನ್ನು ಪಾಂಗಾಳದ ಬಬ್ಬುಸ್ವಾಮಿ ದೈವಸ್ಥಾನದ ನೇಮೋತ್ಸವದಲ್ಲಿದ್ದಾಗ ಫೋನ್ ಕರೆ ಮಾಡಿ
ಕರೆಸಿಕೊಳ್ಳಲಾಗಿತ್ತು. ಮೊಬೈಲ್ ಕರೆ ಬಂದ ಹಿನ್ನಲೆಯಲ್ಲಿ ಅವರು ರಾಷ್ಟ್ರೀಯ ಹೆದ್ದಾರಿ ಬಳಿ ಬಂದಿದ್ದರು. ಬಳಿಕ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ರಕ್ತ ಮಡುವಿನಲ್ಲಿ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶರತ್ ಅವರ ಎದೆಯ ಭಾಗಕ್ಕೆ ಬಲವಾಗಿ ಚೂರಿ ಹಾಕಿದ್ದ ಹಿನ್ನಲೆಯಲ್ಲಿ ಶರತ್ ಶೆಟ್ಟಿ ಸಾವನ್ನಪ್ಪಿದ್ದರು.

ಇದೀಗ ಕೊಲೆಯ ಬಳಿಕ ಸ್ಥಳದ ಅಕ್ಕಪಕ್ಕದಲ್ಲಿರುವ ಸಿಸಿ ಟಿವಿ ಫೂಟೇಜ್ ನ್ನು ಪೊಲೀಸರು ಸಂಗ್ರಹಿಸಿದ್ದಾರೆ. ತನಿಖೆಗಾಗಿ ಕಾರ್ಕಳ ಡಿವೈಎಸ್ಪಿ ನೇತೃತ್ವದಲ್ಲಿ ಮೂರು ತಂಡ ರಚಿಸಲಾಗಿದೆ.

ಶರತ್ ಶೆಟ್ಟಿ, ಭೂ ವ್ಯವಹಾರ ನಡೆಸುತ್ತಿದ್ದ ಕಾರಣ, ಕಮಿಷನ್ ಹಣದ ವಿಚಾರದಲ್ಲಿ ಕೊಲೆಯಾಗಿರಬಹುದೇ ಎಂಬ ಆಯಾಮದಲ್ಲಿ ತನಿಖೆ ನಡೆಯುತ್ತಿದೆ ಎನ್ನಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago