Featured

ಕಾಪು: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ಗ್ರಾಮಸ್ಥರಿಂದ ತಡೆ – vishwanews24

ಕಾಪು: ಪಾದೂರು ಜಲ್ಲಿ ಕ್ರಷರ್ ನಿರ್ಮಾಣದ ಜಂಟಿ ಸರ್ವೇಗೆ ಬಂದ ಅಧಿಕಾರಿಗಳನ್ನು  ಹಿಮ್ಮೆಟ್ಟಿಸಿದ ಗ್ರಾಮಸ್ಥರು

ಕಾಪು: ಮಜೂರು ಗ್ರಾಪಂ ವ್ಯಾಪ್ತಿಯ ಪಾದೂರು ಐಎಸ್‌ಪಿಆರ್‌ಲ್‌ ಯೋಜನಾ ಪುದೇಶದೊಳಗೆ ನಿರ್ಮಿಸಲು ಉದ್ದೇಶಿಸಿರುವ ಪಾದೂರು ಜಲ್ಲಿ ಕಷರ್‌ಗೆ ಜಮೀನು ನೀಡುವ ಬಗ್ಗೆ ಜಂಟಿ ಸರ್ವೇಗೆ ಆಗಮಿಸಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳನ್ನು ಸ್ಥಳೀಯರು ಬುಧವಾರ ಹಿಮ್ಮೆಟ್ಟಿಸಿದ್ದಾರೆ.

ಐಎಸ್‌ಪಿಆರ್‌ಎಲ್ ಯೋಜನಾ ಪ್ರದೇಶದೊಳಗೆ ಸಂಗ್ರಹಗೊಂಡಿರುವ ಬಂಡೆ ಕಲ್ಲುಗಳನ್ನು ತೆರವುಗೊಳಿಸುವುದಕ್ಕಾಗಿ ಯೋಜನಾ ಪ್ರದೇಶದೊಳಗೆ ಜಲ್ಲಿ ಕ್ರಷರ್ ನಿರ್ಮಾಣ ಮಾಡುವ ಬಗ್ಗೆ ಮಜೂರು ಗ್ರಾಪಂಗೆ ಮಾಹಿತಿ ಸಿಕ್ಕಿತ್ತು. ಇದನ್ನು ವಿರೋಧಿಸಿ ಮಜೂರು ಗ್ರಾಪಂ ಗ್ರಾಮಸ್ಥರನ್ನು ಸೇರಿಸಿಕೊಂಡು ಜನಾಭಿಪ್ರಾಯ ಸಭೆ ನಡೆಸಿದ್ದು ಅಲ್ಲಿ ಗ್ರಾಮಸ್ವರ ಬೇಡಿಕೆಯಂತೆ ಜಲ್ಲಿ ಕ್ರಷರ್ ಸ್ಕ್ಯಾಪನೆಗೆ ವಿರೋಧ ವ್ಯಕ್ತ ಪಡಿಸಿ ನಿರ್ಣಯ ಕೈಗೊಳ್ಳಲಾಗಿತ್ತು. ಈ ವಿಚಾರವನ್ನು ಸಭೆಗೆ ಆಗಮಿಸಿದ್ದ ಉಡುಪಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಅಶ್ವಿನಿ ಅವರಿಗೂ ಮನವರಿಕೆ ಮಾಡಿಕೊಡಲಾಗಿತ್ತು.
ಈ ನಡುವೆಯೇ ಬುಧವಾರ ಉಡುಪಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಅಶ್ವಿನಿ ನೇತೃತ್ವದ ಅಧಿಕಾರಿಗಳ ತಂಡ ಏಕಾಏಕಿಯಾಗಿ ಐಎಸ್‌ಪಿಆರ್‌ಲ್ ಪರಿಸರದಲ್ಲಿ ಜಂಟಿ ಸರ್ವೇಗಾಗಿ ಬಂದಿದ್ದು, ಇದನ್ನು ತಿಳಿಯುತ್ತಿದ್ದಂತೆಯೇ ಸ್ಥಳೀಯರು ಗ್ರಾಮ ಪಂಚಾಯತ್‌ಗೆ ಮಾಹಿತಿ ನೀಡಿದ್ದರು.

ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಮಜೂರು ಗ್ರಾ.ಪಂ. ಅಧ್ಯಕ್ಷ ಪುಸಾದ್‌ ಶೆಟ್ಟಿ ವಳದೂರು, ಗ್ರಾ.ಪಂ. ಸದಸ್ಯರು, ಜನಜಾಗೃತಿ ಸಮಿತಿ ಅಧ್ಯಕ್ಷ ಅರುಣ್‌ ಶೆಟ್ಟಿ ಪಾದೂರು ಸೇರಿದಂತೆ ಸ್ಥಳೀಯರು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ತಂಡಕ್ಕೆ ವಿರೋಧ ವ್ಯಕ್ತ ಪಡಿಸಿ, ಗ್ರಾ.ಪಂ. ಮಂಡಿಸಿದ ನಿರ್ಣಯದ ಪ್ರತಿಯನ್ನು ಅಧಿಕಾರಿಗಳಿಗೆ ನೀಡಿದರು.

ಉಡುಪಿ ಜಿಲ್ಲಾಧಿಕಾರಿಯವರ ಆದೇಶದಂತೆ ಜಂಟಿ ಸರ್ವೇಗಾಗಿ ಬಂದಿದ್ದು, ಜನರ ವಿರೋಧದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡುವುದಾಗಿ ತಿಳಿಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಜನರ ಒತ್ತಾಯಕ್ಕೆ ಮಣಿದು ಬರಿಗೈಯಲ್ಲಿಯೇ ಹಿಂದಿರುಗಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago