Featured

ಕಾಪು: ಪಿಡಬ್ಲ್ಯುಡಿ ಜಿಲ್ಲಾ ಮುಖ್ಯ ರಸ್ತೆ ಅಂಚಿನಿಂದ ಕಟ್ಟಡ ರೇಖೆ ಅಂತರ 6 ಮೀ.ಗೆ ನಿಗದಿಪಡಿಸಿ : ಸರಕಾರ ಆದೇಶ – vishwanews24

ಕಾಪು:  ಕಟ್ಟಡ ರೇಖೆ ಅಂತರ ಪರಿಷ್ಕರಣೆ: 6 ಮೀ.ಗೆ ನಿಗದಿಪಡಿಸಿ ಸರಕಾರ ಆದೇಶ ; ಪಿಡಬ್ಲ್ಯುಡಿ ವ್ಯಾಪ್ತಿಯ ಎಲ್ಲ ಕಟ್ಟಡಗಳಿಗೆ ಅನ್ವಯ

ಕಾಪು: ರಾಜ್ಯ ಹೆದ್ದಾರಿ ಮತ್ತು ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಜಿಲ್ಲಾ ಮುಖ್ಯ ರಸ್ತೆಗಳ ರಸ್ತೆ ಭೂ ಗಡಿಯ ಅಂಚಿನಿಂದ ಕಟ್ಟಡಗಳ ರೇಖೆಯ ಅಂತರದ ವಿಷಯವಾಗಿ ಹಿಂದಿನ ಆದೇಶವನ್ನು ಪರಿಷ್ಕರಿಸಿ 6 ಮೀ.ಗೆ ಸರಕಾರ ನಿಗದಿಗೊಳಿಸಿದೆ.

ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿರುವ ರಾಜ್ಯ ಹೆದ್ದಾರಿಗಳಲ್ಲಿ ಬರುವ ಸಿಟಿ ಕಾರ್ಪೊರೇಶನ್‌, ಸಿಟಿ ಮುನ್ಸಿಪಲ್‌ ಕೌನ್ಸಿಲ್‌, ಟೌನ್‌ ಮುನ್ಸಿಪಲ್‌ ಕೌನ್ಸಿಲ್‌, ಟೌನ್‌ ಪಂಚಾಯತ್‌ ಮತ್ತು ಗ್ರಾಮ ಪಂಚಾಯತ್‌ ಪರಿಮಿತಿಗಳಲ್ಲಿ ರಾಜ್ಯ ಹೆದ್ದಾರಿಯ ದಾಖಲಿತ ರಸ್ತೆ ಭೂ ಗಡಿಯ ಅಂಚಿನಿಂದ ಕಟ್ಟಡಗಳ ರೇಖೆಯ ಅಂತರ 6 ಮೀ. ಆಗಿದ್ದು, ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಜಿಲ್ಲಾ ಮುಖ್ಯ ರಸ್ತೆಗಳಿಗೆ 25 ಮೀ. ನಿಗದಿಗೊಳಿಸಲಾಗಿತ್ತು. ಇದರಿಂದ ಸಾರ್ವಜನಿಕರಿಗೆ ವಾಸ್ತವ್ಯ ಹಾಗೂ ವಾಣಿಜ್ಯ ಕಟ್ಟಡವನ್ನು ನಿರ್ಮಿಸಲು ಕಷ್ಟ ಸಾಧ್ಯವಾಗಿತ್ತು.

ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಅವರು 2024ರ ಡಿ. 2ರಂದು ಈ ಬಗ್ಗೆ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ರಾಜ್ಯ ಹೆದ್ದಾರಿಗಳಂತೆ ಜಿಲ್ಲಾ ಮುಖ್ಯ ರಸ್ತೆಗಳಿಗೂ ಭೂ ಗಡಿ ಅಂಚಿನಿಂದ 6 ಮೀ. ಅಂತರದಲ್ಲಿ ಕಟ್ಟಡ ನಿಯಂತ್ರಣ ರೇಖೆಯನ್ನು ನಿಗದಿಪಡಿಸುವಂತೆ ಕೋರಿದ್ದರು. ಅದರಂತೆ ಸರಕಾರ ಪರಿಷ್ಕೃತ ಆದೇಶ ಹೊರಡಿಸಿದೆ. ಸರಕಾರದ ಈ ನಿರ್ಧಾರವನ್ನು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಸ್ವಾಗತಿಸಿದ್ದಾರೆ.

ಈ ವಿಷಯವನ್ನು ಪರಿಶೀಲನೆ ನಡೆಸಿದ ರಾಜ್ಯ ಸರಕಾರವು ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಅವರ ಮೂಲಕ ಫೆ. 17ರಂದು ಸುತ್ತೋಲೆ ಹೊರಡಿಸಿದೆ.

2024ರ ಅ. 10ರಂದು ಹೊರಡಿಸಿದ್ದ ಹಿಂದಿನ ಆದೇಶವನ್ನು ಪರಿಷ್ಕರಿಸಿ ಭೂ ಗಡಿಯ ಅಂಚಿನಿಂದ ಕಟ್ಟಡದ ರೇಖೆಯ ಪರಿಮಿತಿಯನ್ನು 6ಮೀ ನಿಗದಿಪಡಿಸಿರುವುದ ಆದೇಶವನ್ನು ರಾಜ್ಯ ಹೆದ್ದಾರಿಗಳ ಜತೆಗೆ ಲೊಕೋಪಯೋಗಿ ಇಲಾಖಾ ವ್ಯಾಪ್ತಿಯ ಜಿಲ್ಲಾ ಮುಖ್ಯ ರಸ್ತೆಗಳಿಗೂ ವಿಸ್ತರಿಸಿರುವುದಾಗಿ ತಿಳಿಸಿದೆ.

ಪಿಡಬ್ಲ್ಯುಡಿ ವ್ಯಾಪ್ತಿಯ ಎಲ್ಲ ಕಟ್ಟಡಗಳಿಗೆ ಅನ್ವಯ
ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಾಜ್ಯ ಹೆದ್ದಾರಿಗಳಲ್ಲಿ ಬರುವ ಸಿಟಿ ಕಾರ್ಪೊರೇಶನ್‌, ಸಿಟಿ ಮುನ್ಸಿಪಲ್‌ ಕೌನ್ಸಿಲ್‌, ಟೌನ್‌ ಮುನ್ಸಿಪಲ್‌ ಕೌನ್ಸಿಲ್‌, ಟೌನ್‌ ಪಂಚಾಯತ್‌ ಮತ್ತು ಗ್ರಾಮ ಪಂಚಾಯತ್‌ನ ಪ್ರತೀ ಗ್ರಾಮ ಠಾಣಾ ಪರಿಮಿತಿಗೂ ಈ ಆದೇಶ ಅನ್ವಯಿಸಲಿದೆ. ಅದರ ಜತೆಗೆ ಸಿಟಿ ಕಾರ್ಪೋರೇಶನ್‌ ಪರಿಮಿತಿಯಿಂದ 15 ಕಿ. ಮೀ. ದೂರದವರೆಗೆ 12 ಮೀಟರ್‌ ವರೆಗೆ ಪರಿಷ್ಕರಿಸಿದೆ.

 

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

15 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

15 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

16 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

16 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

16 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

17 hours ago