ಕಾಪು: ರಾಜ್ಯ ಹೆದ್ದಾರಿ ಮತ್ತು ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಜಿಲ್ಲಾ ಮುಖ್ಯ ರಸ್ತೆಗಳ ರಸ್ತೆ ಭೂ ಗಡಿಯ ಅಂಚಿನಿಂದ ಕಟ್ಟಡಗಳ ರೇಖೆಯ ಅಂತರದ ವಿಷಯವಾಗಿ ಹಿಂದಿನ ಆದೇಶವನ್ನು ಪರಿಷ್ಕರಿಸಿ 6 ಮೀ.ಗೆ ಸರಕಾರ ನಿಗದಿಗೊಳಿಸಿದೆ.
ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿರುವ ರಾಜ್ಯ ಹೆದ್ದಾರಿಗಳಲ್ಲಿ ಬರುವ ಸಿಟಿ ಕಾರ್ಪೊರೇಶನ್, ಸಿಟಿ ಮುನ್ಸಿಪಲ್ ಕೌನ್ಸಿಲ್, ಟೌನ್ ಮುನ್ಸಿಪಲ್ ಕೌನ್ಸಿಲ್, ಟೌನ್ ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಪರಿಮಿತಿಗಳಲ್ಲಿ ರಾಜ್ಯ ಹೆದ್ದಾರಿಯ ದಾಖಲಿತ ರಸ್ತೆ ಭೂ ಗಡಿಯ ಅಂಚಿನಿಂದ ಕಟ್ಟಡಗಳ ರೇಖೆಯ ಅಂತರ 6 ಮೀ. ಆಗಿದ್ದು, ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಜಿಲ್ಲಾ ಮುಖ್ಯ ರಸ್ತೆಗಳಿಗೆ 25 ಮೀ. ನಿಗದಿಗೊಳಿಸಲಾಗಿತ್ತು. ಇದರಿಂದ ಸಾರ್ವಜನಿಕರಿಗೆ ವಾಸ್ತವ್ಯ ಹಾಗೂ ವಾಣಿಜ್ಯ ಕಟ್ಟಡವನ್ನು ನಿರ್ಮಿಸಲು ಕಷ್ಟ ಸಾಧ್ಯವಾಗಿತ್ತು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು 2024ರ ಡಿ. 2ರಂದು ಈ ಬಗ್ಗೆ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ರಾಜ್ಯ ಹೆದ್ದಾರಿಗಳಂತೆ ಜಿಲ್ಲಾ ಮುಖ್ಯ ರಸ್ತೆಗಳಿಗೂ ಭೂ ಗಡಿ ಅಂಚಿನಿಂದ 6 ಮೀ. ಅಂತರದಲ್ಲಿ ಕಟ್ಟಡ ನಿಯಂತ್ರಣ ರೇಖೆಯನ್ನು ನಿಗದಿಪಡಿಸುವಂತೆ ಕೋರಿದ್ದರು. ಅದರಂತೆ ಸರಕಾರ ಪರಿಷ್ಕೃತ ಆದೇಶ ಹೊರಡಿಸಿದೆ. ಸರಕಾರದ ಈ ನಿರ್ಧಾರವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ವಾಗತಿಸಿದ್ದಾರೆ.
ಈ ವಿಷಯವನ್ನು ಪರಿಶೀಲನೆ ನಡೆಸಿದ ರಾಜ್ಯ ಸರಕಾರವು ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಅವರ ಮೂಲಕ ಫೆ. 17ರಂದು ಸುತ್ತೋಲೆ ಹೊರಡಿಸಿದೆ.
2024ರ ಅ. 10ರಂದು ಹೊರಡಿಸಿದ್ದ ಹಿಂದಿನ ಆದೇಶವನ್ನು ಪರಿಷ್ಕರಿಸಿ ಭೂ ಗಡಿಯ ಅಂಚಿನಿಂದ ಕಟ್ಟಡದ ರೇಖೆಯ ಪರಿಮಿತಿಯನ್ನು 6ಮೀ ನಿಗದಿಪಡಿಸಿರುವುದ ಆದೇಶವನ್ನು ರಾಜ್ಯ ಹೆದ್ದಾರಿಗಳ ಜತೆಗೆ ಲೊಕೋಪಯೋಗಿ ಇಲಾಖಾ ವ್ಯಾಪ್ತಿಯ ಜಿಲ್ಲಾ ಮುಖ್ಯ ರಸ್ತೆಗಳಿಗೂ ವಿಸ್ತರಿಸಿರುವುದಾಗಿ ತಿಳಿಸಿದೆ.
ಪಿಡಬ್ಲ್ಯುಡಿ ವ್ಯಾಪ್ತಿಯ ಎಲ್ಲ ಕಟ್ಟಡಗಳಿಗೆ ಅನ್ವಯ
ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಾಜ್ಯ ಹೆದ್ದಾರಿಗಳಲ್ಲಿ ಬರುವ ಸಿಟಿ ಕಾರ್ಪೊರೇಶನ್, ಸಿಟಿ ಮುನ್ಸಿಪಲ್ ಕೌನ್ಸಿಲ್, ಟೌನ್ ಮುನ್ಸಿಪಲ್ ಕೌನ್ಸಿಲ್, ಟೌನ್ ಪಂಚಾಯತ್ ಮತ್ತು ಗ್ರಾಮ ಪಂಚಾಯತ್‌ನ ಪ್ರತೀ ಗ್ರಾಮ ಠಾಣಾ ಪರಿಮಿತಿಗೂ ಈ ಆದೇಶ ಅನ್ವಯಿಸಲಿದೆ. ಅದರ ಜತೆಗೆ ಸಿಟಿ ಕಾರ್ಪೋರೇಶನ್ ಪರಿಮಿತಿಯಿಂದ 15 ಕಿ. ಮೀ. ದೂರದವರೆಗೆ 12 ಮೀಟರ್ ವರೆಗೆ ಪರಿಷ್ಕರಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…